ಬುಧವಾರ, ಏಪ್ರಿಲ್ 21, 2021
23 °C

ದೇವರಾಜ ಅರಸು ಕೊಡುಗೆ ಸ್ಮರಣೀಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ದಲಿತರಿಗೆ, ನಿರ್ಗತಿಕರಿಗೆ ಮತ್ತು ಹಿಂದುಳಿದವರಿಗೆ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಪ್ರಮುಖ ಪಾತ್ರ ವಹಿಸಿದ್ದು, ಅವರನ್ನು ಸದಾ ಕಲಾ ಸ್ಮರಿಸಬೇಕಾದ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ವಿ.ಕೃಷ್ಣಪ್ಪ ತಿಳಿಸಿದರು.ದೇವರಾಜ ಅರಸು ಅವರ ಜನ್ಮದಿನಾಚರಣೆ ಅಂಗವಾಗಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಅರಸು ಅವರು ಆಗ ನೀಡಿದ ಕೊಡುಗೆಯಿಂದಲೇ ಈಗ ಹಿಂದುಳಿದವರು ಕೊಂಚ ಸುಧಾರಣೆ ಕಂಡಿದ್ದಾರೆ~ ಎಂದರು.`ಹಿಂದುಳಿದವರು, ನಿರ್ಗತಿಕರು ಮತ್ತು ದಲಿತರು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂಬ ಅಭಿಲಾಷೆ ಹೊತ್ತಿದ್ದ ಅರಸು ಅವರು ಅಗತ್ಯ ಸುಧಾರಣಾ ಕ್ರಮ ಕೈಗೊಂಡರು. ಸಾಮಾಜಿಕ ಪರಿವರ್ತನೆ ಮಾಡಿದರು~ ಎಂದರು.`ಊಳುವವನಿಗೆ ಭೂಮಿ, ವಸತಿಹೀನರಿಗೆ ವಸತಿ ಸೌಲಭ್ಯ ಸೇರಿದಂತೆ ಇತರ ಯೋಜನೆಗಳನ್ನು ಜಾರಿಗೆ ತಂದ ಅವರು ರಾಜ್ಯದಲ್ಲಿ ಹೊಸ ಮಾದರಿಯ ಸಾಮಾಜಿಕ ಕ್ರಾಂತಿಯನ್ನೇ ಮಾಡಿದರು. ಅವರ ದೂರದೃಷ್ಟಿಯಿಂದಲೇ ಹಿಂದುಳಿದವರನ್ನು ನೋಡುವ ದೃಷ್ಟಿಕೋನ ಬದಲಾಯಿತು~ ಎಂದು ಹೇಳಿದರು.ಶಾಸಕರಾದ ಎನ್.ಸಂಪಂಗಿ, ಕೆ.ಪಿ.ಬಚ್ಚೇಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ವಿ.ಕೃಷ್ಣಪ್ಪ, ಉಪಾಧ್ಯಕ್ಷೆ ಬಿ.ಸಾವಿತ್ರಮ್ಮ, ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ.ಎಸ್.ಶೇಖರಪ್ಪ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ವೆಂಕಟನಾರಾಯಣಪ್ಪ ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.