ಬುಧವಾರ, ಏಪ್ರಿಲ್ 14, 2021
31 °C

ದೇವಸ್ಥಾನದಲ್ಲಿ ಕಳ್ಳತನ ತಡೆಗೆ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ದೇವಸ್ಥಾನಗಳಲ್ಲಿ ನಡೆಯುವ ಕಳ್ಳತನ ತಡೆಯಲು ಸರ್ಕಾರ ಅಗತ್ಯ ಕ್ರಮಕೈಗೊಂಡಿದೆ. ಅಗತ್ಯವಿದ್ದ ಕಡೆ ದೇವಸ್ಥಾನಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸುವುದು, ಭದ್ರತಾ ಸಿಬ್ಬಂದಿಗಳನ್ನು ನೇಮಿಸುವುದು ಹಾಗೂ ಪೊಲೀಸ್ ಗಸ್ತು ಹೆಚ್ಚಿಸಲಾಗುವುದು ಎಂದು ಮುಜರಾಯಿ ಸಚಿವ ಡಾ.ವಿ.ಎಸ್. ಆಚಾರ್ಯ ಶುಕ್ರವಾರ ವಿಧಾನಪರಿಷತ್ತಿಗೆ ತಿಳಿಸಿದರು.ಮಂಡ್ಯ ಜಿಲ್ಲೆಯ ದೇವಸ್ಥಾನಗಳಲ್ಲಿ ನಡೆಯುತ್ತಿರುವ ಕಳ್ಳತನಗಳನ್ನು ತಡೆಯುವ ಬಗ್ಗೆ ಬಿಜೆಪಿಯ ಅಶ್ವಥನಾರಾಯಣ ಅವರು ಕೇಳಿದ ಪ್ರಶ್ನೆಗೆ ಲಿಖಿತ ರೂಪದಲ್ಲಿ ಸಚಿವರು ಉತ್ತರಿಸಿದರು.ಮಂಡ್ಯ ಜಿಲ್ಲೆಯಲ್ಲಿರುವ ಕೆಲವು ಮುಜರಾಯಿ ದೇವಸ್ಥಾನಗಳಲ್ಲಿ ಕಳೆದ 4-5 ವರ್ಷಗಳಲ್ಲಿ ಕಳ್ಳತನಗಳು ನಡೆದಿವೆ. ಇದು ಸರ್ಕಾರದ ಗಮನಕ್ಕೆ ಬಂದಿದೆ. ಇದನ್ನು ತಡೆಗಟ್ಟುವ ಸಲುವಾಗಿ ಮೇಲುಕೋಟೆ ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಾಲಯಕ್ಕೆ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ಅವರು ವಿವರಣೆ ನೀಡಿದರು.ಮೇಲುಕೋಟೆ ದೇವಸ್ಥಾನದ ಅಭಿವೃದ್ಧಿಗೆ ಪ್ರಾಧಿಕಾರ ರಚಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟನೆ ನೀಡಿದ ಅವರು, ‘ಮೇಲುಕೋಟೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸಮಿತಿ ರಚಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇದೆ’ ಎಂದು ಅವರು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.