ಸೋಮವಾರ, ಏಪ್ರಿಲ್ 12, 2021
29 °C

ದೇವಸ್ಥಾನದ ಬೀಗ ಮುರಿದು ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೆಲಮಂಗಲ: ತಾಲ್ಲೂಕಿನ ಹೊಸಪಾಳ್ಯದ ಶ್ರೀಮುನೇಶ್ವರ ಸ್ವಾಮಿ ದೇವಸ್ಥಾನದ ಬೀಗ ಮುರಿದು ಹುಂಡಿ ಮತ್ತು ಬೆಳ್ಳಿ ಸಾಮಗ್ರಿಗಳನ್ನು ಅಪಹರಿಸಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.ರಾಮಯ್ಯ ಎಂಬುವವರ ಜಮೀನಿನಲ್ಲಿರುವ ಶ್ರೀಮುನೇಶ್ವರ ದೇವಸ್ಥಾನದಲ್ಲಿದ್ದ ಸುಮಾರು ಐದು  ಸಾವಿರ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ ಮತ್ತು ಹುಂಡಿಯನ್ನು ದರೋಡೆಕೋರರು ದೋಚಿದ್ದಾರೆ.ಗ್ರಾಮಾಂತರ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ಎಂ.ಬಿ.ನವೀನ್‌ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.