ಶನಿವಾರ, ಮೇ 28, 2022
30 °C

ದೇವಾಲಯ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಳ್ಳೇಗಾಲ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್. ಮಹದೇವಪ್ರಸಾದ್ ಭಾನುವಾರ ತಾಲ್ಲೂಕಿನ ಶಿವನಸಮುದ್ರ ಸಮೂಹ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಮೃದ್ಧಿ ಮಳೆ- ಬೆಳೆಗೆ ಪ್ರಾರ್ಥನೆ ಸಲ್ಲಿಸಿದರು.ಶಿವನಸಮುದ್ರ ಮಧ್ಯರಂಗನಾಥಸ್ವಾಮಿ ದೇವಾಲಯ, ಪ್ರಸನ್ನ ಮೀನಾಕ್ಷಿ ದೇವಾಲಯ, ಆದಿಶಕ್ತಿ ಮಾರಮ್ಮ ದೇವಾಲಯಗಳಲ್ಲಿ ನಾಡಿನ ಅಭಿವೃದ್ಧಿಗಾಗಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ದೇವಾಲಯದ ಅಭಿವೃದ್ಧಿ ಕಾಮಗಾರಿಗಳು ಮತ್ತು ಸಮಸ್ಯೆಗಳ ಬಗ್ಗೆ ಸಚಿವರು ಮಾಹಿತಿ ಪಡೆದರು.ಮಧ್ಯರಂಗನಾಥ ದೇವಾಲಯದ ಸಮಗ್ರ ಅಭಿವೃದ್ಧಿಗಾಗಿ ರೂ 1 ಕೋಟಿ ಬಿಡುಗಡೆಯಾಗಿದೆ. ದೇವಾಲಯದಲ್ಲಿ ನಡೆಯುತ್ತಿರುವ ದಾಸೋಹಕ್ಕಾಗಿ ಕೊಠಡಿ, ಅಂಗಡಿ ಮಳಿಗೆಗಳು, ಅರ್ಚಕರಿಗೆ ವಸತಿ ಗೃಹ, ಡಾರ್ಮೆಂಟರಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಕಲ್ಪಿಸಲು ಸದ್ಯದಲ್ಲೇ ಕಾಮಗಾರಿಗೆ ಚಾಲನೆ ದೊರೆಯಲಿದೆ ಎಂದು ಹೇಳಿದರು. ಸಂಸದ ಆರ್. ಧ್ರುವನಾರಾಯಣ, ಶಾಸಕ ನರೇಂದ್ರ, ಉಪ ವಿಭಾಗಾಧಿಕಾರಿ ಎಚ್.ಎಸ್. ಸತೀಶ್‌ಬಾಬು ಇತರರು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.