ಶನಿವಾರ, ಮೇ 8, 2021
26 °C

ದೇಶಕ್ಕಾಗಿ ಹೋರಾಡಿದ ಶಿವಾಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ತಾಪುರ: `ದೇಶದ ಹಿತಕ್ಕಾಗಿ ಹೋರಾಡಿದ ಮಹಾನ್ ರಾಷ್ಟ್ರನಾಯಕರಲ್ಲಿ ಛತ್ರಪತಿ ಶಿವಾಜಿ ಅಗ್ರಗಣ್ಯರು. ಶಿವಾಜಿ ಮಹಾರಾಜರು ಸಾಮ್ರಾಜ್ಯದ ದೊರೆಯಾಗಿ ದೇಶದ ಸಂರಕ್ಷಣೆ ಮಾಡಿದ ಅಪ್ರತಿಮ ರಾಷ್ಟ್ರಭಕ್ತ~ ಎಂದು ಶಾಸಕ ವಾಲ್ಮೀಕ ನಾಯಕ ಹೇಳಿದರು.ಸ್ಥಳೀಯ ತಹಸೀಲ್ದಾರ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ ಪ್ರಥಮ ಜಯಂತಿ ಕಾರ್ಯಕ್ರಮದಲ್ಲಿ ಶಿವಾಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, `ಶಿವಾಜಿ  ಅವರ ಸಾಹಸ, ಧೈರ್ಯ, ತ್ಯಾಗ, ಸಿದ್ಧಾಂತಗಳನ್ನು ಇಂದಿನ ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು~ ಎಂದು ಕರೆ ನೀಡಿದರು.ಮುಖ್ಯ ಅತಿಥಿಯಾಗಿದ್ದ ಮರಾಠಾ ಸಮಾಜದ ತಾಲ್ಲೂಕು ಅಧ್ಯಕ್ಷ ಭೀಮರಾಯ ಜಾಧವ್ ಮಾತನಾಡಿ, `ಸರ್ಕಾರದ ಹಣ ಕೇಳದೆ ಸಮಾಜದ ಜನರೇ ಸ್ವಂತ ಖರ್ಚಿನಲ್ಲಿ ಪ್ರತಿಮೆ ಸ್ಥಾಪನೆ ಮಾಡುತ್ತೇವೆ. ಚಿತ್ತಾಪುರ ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪನೆಗೆ ಸರ್ಕಾರದ ವತಿಯಿಂದ ಸ್ಥಳಾವಕಾಶ ಮಾಡಿಕೊಡಬೇಕು ಎಂದು ಶಾಸಕರಿಗೆ ಮನವಿ ಮಾಡಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಸವರಾಜ ಬೆಣ್ಣೂರಕರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿಜಯಕುಮಾರ ಲೊಡ್ಡಾನೋರ್ ಮಾತನಾಡಿದರು.ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಹಾದೇವಿ ನಾಶಿ, ಸರ್ಕಲ್ ಇನ್ಸ್‌ಪೆಕ್ಟರ್ ಚಂದ್ರಕಾಂತ ಪೂಜಾರಿ ಅತಿಥಿಗಳಾಗಿದ್ದರು. ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಹನುಮಂತಗೌಡ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಬಿ. ಬಿರಾದಾರ, ಹೊಂಗಿರಣ ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಮಹ್ಮದ್ ಇಬ್ರಾಹಿಂ, ಯುವ ಮುಖಂಡರಾದ ತಮ್ಮಣ್ಣ ಡಿಗ್ಗಿ, ಚಂದ್ರು ಕಾಳಗಿ, ರವೀಂದ್ರ ಇವಣಿ, ಗ್ರಾಮ ಲೇಖಪಾಲಕ ಕರಬಸ್ಸು ಇನ್ನಿತರರು ಇದ್ದರು.ತಹಸೀಲ್ದಾರ್ ಬಾಲರಾಜ ಸ್ವಾಗತಿಸಿದರು. ಶಿರಸ್ತೇದಾರ್ ಶ್ರೀನಿವಾಸ ನಿರೂಪಿಸಿದರು. ಕಂದಾಯ ನಿರೀಕ್ಷಕ ಸೂರ್ಯನಾರಾಯಣ ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.