ದೇಶಕ್ಕೆ ರಾಜೀವ್‌ಗಾಂಧಿ ಕೊಡುಗೆ ಅನನ್ಯ

7

ದೇಶಕ್ಕೆ ರಾಜೀವ್‌ಗಾಂಧಿ ಕೊಡುಗೆ ಅನನ್ಯ

Published:
Updated:

ಮದ್ದೂರು: ಮತದಾನದ ವಯಸ್ಸನ್ನು 21ವರ್ಷದಿಂದ 18ವರ್ಷಕ್ಕೆ ಇಳಿಸುವ ಮೂಲಕ ಯುವ ಮತದಾರರಿಗೆ ಮತದಾನದ ಹಕ್ಕನ್ನು ನೀಡಿದ ಕೀರ್ತಿ ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಅವರಿಗೆ ಸಲ್ಲುತ್ತದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಎಸ್.ಗುರುಚರಣ್  ತಿಳಿಸಿದರು.ಸಮೀಪದ ಶಿವಪುರದಲ್ಲಿ ಸೋಮವಾರ ಏರ್ಪಡಿಸಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಾಗೂ ರಾಜೀವ್‌ಗಾಂಧಿ ಅವರ 21ನೇ ವರ್ಷ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.ರಾಷ್ಟ್ರವನ್ನು ಸದೃಢವಾಗಿ ಕಟ್ಟಲು ಯುವಕರಿಂದ ಮಾತ್ರ ಸಾಧ್ಯ ಎಂಬ ಬಲವಾದ ನಂಬಿಕೆಯನ್ನು ರಾಜೀವ್ ಹೊಂದಿದ್ದರು. ರಾಷ್ಟ್ರದ ಅಣ್ವಸ್ತ್ರಶಕ್ತಿ ಬಲವರ್ಧನೆ ಸೇರಿದಂತೆ ವಿದ್ಯುನ್ಮಾನ ಹಾಗೂ ದೂರ ಸಂಪರ್ಕ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆ ಅನನ್ಯ ಎಂದು ಬಣ್ಣಿಸಿದರು.ಯುವ ನೇತಾರ ರಾಹುಲ್‌ಗಾಂಧಿ ಅವರ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಘಟಕಗಳನ್ನು ಪುನರ್ ರಚಿಸಿದ್ದು, ತಳಹಂತದಿಂದ ಪಕ್ಷ ಬಲವರ್ಧನೆಗೆ ಚಾಲನೆ ನೀಡಲಾಗಿದೆ. ಪ್ರತಿ ತಾಲ್ಲೂಕಿನಲ್ಲಿ ಯುವ ಕಾರ್ಯಕರ್ತರ ಸಮಾವೇಶ ಏರ್ಪಡಿಸಿದ್ದು, ಕಾಂಗ್ರೆಸ್ ಪಕ್ಷದ ಇತಿಹಾಸ, ಸಾಧನೆಯನ್ನು ಯುವಜನರಿಗೆ ಪರಿಚಯಿಸಲಾಗುತ್ತಿದೆ ಎಂದರು.ರಾಜ್ಯ ಸಂಪನ್ಮೂಲ ವ್ಯಕ್ತಿ ರಾಜಣ್ಣ ಸಮಾವೇಶ ಕುರಿತು ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಸದಸ್ಯ ಪಿ.ಸಂದರ್ಶ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಿದಂಬರ್, ಪ್ರಧಾನ ಕಾರ್ಯದರ್ಶಿ ರಾಜೀವ್, ತಾಲ್ಲೂಕು ಅಧ್ಯಕ್ಷ ಗೌರಿಶಂಕರ್, ಮಳವಳ್ಳಿ ತಾಲ್ಲೂಕು ಅಧ್ಯಕ್ಷ ಕೃಷ್ಣೇಗೌಡ, ನಾಗಮಂಗಲ ತಾಲ್ಲೂಕು ಅಧ್ಯಕ್ಷ ಬಾಬು, ಪಿ.ರಾಘವ ಪಾಲ್ಗೊಂಡಿದ್ದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry