ಮಂಗಳವಾರ, ಮೇ 24, 2022
27 °C

ದೇಶದ ಅಭಿವೃದ್ಧಿಗೆ ಸಮಾಜದ ಕೊಡುಗೆ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಪ್ರತಿ ಸಮಾಜಕ್ಕೆ ತನ್ನದೇ ಆದ ಅಸ್ತಿತ್ವ ಇರಬೇಕು. ಹಾಗೆಯೇ ಅಸ್ತಿತ್ವ ಹೊಂದುವ ಪ್ರತಿ ಸಮಾಜ ದೇಶದ ಅಭಿವೃದ್ಧಿ ಕಡೆಗೂ ಗಮನ ಹರಿಸಬೇಕು ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹೇಳಿದರು.ನಗರದ ಗೋಪಶೆಟ್ಟಿಕೊಪ್ಪದ ಕೆಎಚ್‌ಬಿ ಕಾಲೊನಿಯಲ್ಲಿ ಗುರುವಾರ ಬ್ರಾಹ್ಮಣ ಸೇವಾ ಸಂಘ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, ಸಮುದಾಯ ಭವನದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.ಪ್ರತಿ ಸಮುದಾಯ, ಸಮಾಜದ ಬೆಳವಣಿಗೆಯಾಗಬೇಕು. ಅಂತೆಯೇ ಬ್ರಾಹ್ಮಣ ಸಮಾಜದ ನೂತನ ಸಮುದಾಯ ಭವನದ ನಿರ್ಮಾಣಕ್ಕೆ ತಗುಲುವ ವೆಚ್ಚವನ್ನು ಎರಡು ಕಂತುಗಳಲ್ಲಿ ನೀಡುವುದಾಗಿ ಭರವಸೆ ನೀಡಿದರು.ಸಮಾರಂಭದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ, ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣೀಕ್, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಶುಭಾ ಕೃಷ್ಣಮೂರ್ತಿ, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎ.ಎಸ್. ಪದ್ಮನಾಭ್ ಭಟ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಸ್. ಜ್ಞಾನೇಶ್ವರ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಕೆ. ದಿವಾಕರ್, ಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಎಚ್.ಎಸ್. ಶ್ರೀನಿವಾಸ್‌ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.