ತರೀಕೆರೆ: ಅಸಮರ್ಪಕ ಬಂಡವಾಳ ಹೂಡಿಕೆ ಮತ್ತು ಸಾಂಪ್ರದಾಯಿಕ ಆರ್ಥಿಕ ವ್ಯವಸ್ಥೆಯಿಂದ ನಲುಗುತ್ತಿದ್ದ ಭಾರತ ಇತ್ತೀಚಿನ ದಿನಗಳಲ್ಲಿ ಯೂರೋಪ್ ರಾಷ್ಟ್ರಗಳಲ್ಲಿ ಅತ್ಯಂತ ಶಕ್ತಿಶಾಲಿ ಆರ್ಥಿಕ ವ್ಯವಸ್ಥೆ ಹೊಂದಿದ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ಎ.ಬಾರಿ ಹೇಳಿದರು.

ಇಲ್ಲಿನ ಎಸ್ಜೆಎಂ ಕಾಲೇಜಿನಲ್ಲಿ `ಭಾರತದ ಹಣಕಾಸು ಸೇವೆಗಳ ಒಂದು ಮೌಲ್ಯ ಮಾಪನ~ ಕುರಿತು ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಅಮೆರಿಕದಂತ ರಾಷ್ಟ್ರಗಳು ತೀವ್ರ ಆರ್ಥಿಕ ಕುಸಿತ ಕಂಡರೂ ಭಾರತ ಮಾತ್ರ ತನ್ನ ಪ್ರಬುದ್ಧ ಆರ್ಥಿಕ ನೀತಿಯಿಂದ ಜಾಗತಿಕ ಮಟ್ಟದಲ್ಲಿ ಆರ್ಥಿಕ ಸ್ಥಿರತೆ ಕಾಯ್ದುಕೊಂಡು ಇತರ ರಾಷ್ಟ್ರಗಳಿಗೆ ಮಾದರಿಯಾಗಿದೆ ಎಂದರು.

ದಾವಣಗೆರೆ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಗೋವಿಂದಪ್ಪ ಮಾತನಾಡಿ, ಜನಎ ಬಳಿಗೆ ಬ್ಯಾಂಕ್ ಹೋಗಬೇಕೇ ಹೊರತು ಬ್ಯಾಂಕ್ಗಳಿಗೆ ಜನರು ಎಡತಾಕಬಾರದು ಎಂದರು.

ಶಾಸಕ ಡಿ.ಎಸ್.ಸುರೇಶ್ ಮಾತನಾಡಿದರು. ಕುವೆಂಪು ವಿಶ್ವವಿದ್ಯಾಲಯದ ಅರ್ಥ ಶಾಸ್ತ್ರ ಅಧ್ಯಾಪಕರ ಸಂಘದ ಅಧ್ಯಕ್ಷ ಡಾ.ವೆಂಕಟೇಶ್, ಕಾಲೇಜು ಪ್ರಾಚಾರ್ಯ ಪ್ರೊ.ಟಿ.ಎಚ್.ಕೃಷ್ಣಮೂರ್ತಿ, ಅರ್ಥಶಾಸ್ತ್ರ ಪ್ರಾಧ್ಯಪಕ ಪ್ರೊ.ಕುಮಾರಪ್ಪ ಮತ್ತು ರಾಷ್ಟ್ರದ ವಿವಿಧೆೆಡೆಯಿಂದ ಆಗಮಿಸಿದ್ದ ಅರ್ಥಶಾಸ್ತ್ರ ಪ್ರಾಧ್ಯಾಪಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.