ದೇಶದ ಪ್ರಗತಿಗೆ ಶ್ರಮಿಸಲು ಸಲಹೆ

7

ದೇಶದ ಪ್ರಗತಿಗೆ ಶ್ರಮಿಸಲು ಸಲಹೆ

Published:
Updated:

ಚಿಕ್ಕಬಳ್ಳಾಪುರ: ಸದೃಢ ಮತ್ತು ಸ್ವಾವಲಂಬನೆಯ ದೇಶ ನಿರ್ಮಿಸಲು ಯುವಜನರು ಪ್ರಮುಖ ಪಾತ್ರ ವಹಿಸಬೇಕು. ದೇಶವನ್ನು ಪ್ರಗತಿಪಥದಲ್ಲಿ ಮುನ್ನಡೆಸಲು ಯುವಜನರು ಶ್ರಮಿಸಬೇಕು ಎಂದು ಶಾಸಕ ಕೆ.ಪಿ.ಬಚ್ಚೇಗೌಡ ಸಲಹೆ ನೀಡಿದರು.ನಗರದ ಡಾ. ಜಚನಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಶೆಟ್ಟಿಗೆರೆ ಗ್ರಾಮದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.‘ದೇಶವನ್ನು ಸದೃಢವಾಗಿ ನಿರ್ಮಿಸಲು ದೇಶದ ಇತಿಹಾಸ ಮತ್ತು ಸಂಸ್ಕೃತಿಯನ್ನು ಆಳವಾಗಿ ತಿಳಿದುಕೊಂಡಿರಬೇಕು’ ಎಂದರು.ಸಮಾಜ ಕಲ್ಯಾಣಾಧಿಕಾರಿ ಸುಮಯ್ಯ ರೂಹಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಪ್ರಾಂಶುಪಾಲ ಡಾ. ಚೌಡಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ವೆಂಕಟನಾರಾಯಣಾಚಾರಿ, ಶೆಟ್ಟಿಗೆರೆ ಗ್ರಾಮ ಪಂಚಾಯಿತಿ ಸದಸ್ಯ ಅಶ್ವತ್ಥಪ್ಪ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ರಮೇಶ್, ಶಿಬಿರದ ಅಧಿಕಾರಿ ಶ್ರೀನಿವಾಸ್, ಎಂ.ವೆಂಕಟರಮಣ ಮತ್ತು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry