ಭಾನುವಾರ, ಜೂನ್ 13, 2021
21 °C

ದೇಶಭಕ್ತಿಗೆ ಎನ್‌ಎಸ್‌ಎಸ್ ಸಹಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂಚೋಳಿ: ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿ ಶೀಲ ರಾಷ್ಟ್ರ ಎಂಬ ಗೌರವಕ್ಕೆ ಪಾತ್ರವಾಗುತ್ತಿರುವ ಭಾರತದ ಯುವಜನರಲ್ಲಿ ದೇಶಭಕ್ತಿ ಹಾಗೂ ಸಹೋದರತ್ವ ಬೆಳೆಯಲು ರಾಷ್ಟ್ರೀಯ ಸೇವಾ ಯೋಜನೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದೀಪಕನಾಗ್ ಪುಣ್ಯಶೆಟ್ಟಿ ತಿಳಿಸಿದರು.ಅವರು ಶನಿವಾರ ತಾಲ್ಲೂಕಿನ ಪೋಲಕಪಳ್ಳಿ ಗ್ರಾಮದಲ್ಲಿ ಚಿಂಚೋಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು `ಸದೃಢ ಭಾರತಕ್ಕಾಗಿ ಸದೃಢ ಯುವಕರು~ ಎಂಬ ಶೀರ್ಷಿಕೆ ಅಡಿಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.ತಾವು ಕಾಲೇಜು ವಿದ್ಯಾರ್ಥಿಯಾಗಿದ್ದಾಗ ಎನ್‌ಸಿಸಿ ಘಟಕದಲ್ಲಿ ಸೇವೆ ಸಲ್ಲಿಸಿದ್ದನ್ನು ಮೆಲಕು ಹಾಕಿದ ದೀಪಕನಾಗ್ ಪೋಲಕಪಳ್ಳಿ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿಯವರು ಎನ್‌ಎಸ್‌ಎಸ್ ಸ್ವಯಂ ಸೇವಕರಿಗೆ ಅಗತ್ಯ ಸಹಕಾರ ಹಾಗೂ ಪ್ರೋತ್ಸಾಹ ನೀಡಿ ವಿಶೇಷ ಶಿಬಿರ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.ಗುಲ್ಬರ್ಗ ವಿ.ವಿಯ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ರಮೇಶ ಲಂಡನಕರ್ ಮಾತನಾಡಿ ಎನ್‌ಎಸ್‌ಎಸ್ ವಿಶೇಷ ಶಿಬಿರದ ಮಹತ್ವ ವಿವರಿಸಿದರು.ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಎಂ ಬಾರಿ, ಡೆಕ್ಕನ್ ಎಂ.ಇಡಿ ಕಾಲೇಜಿನ ಪ್ರಾಚಾರ್ಯ ಡಾ. ಸುದರ್ಶನ, ಗ್ರಾಮ ಪಂಚಾಯಿತಿ ಸದಸ್ಯ ಶಿವರಾಜ ಪಾಟೀಲ್ ಮಾತನಾಡಿದರು.ಕಾಲೇಜಿನ ಪ್ರಾಚಾರ್ಯ ಶ್ರೀನಿವಾಸ ನಾಯನೂರು ಅಧ್ಯಕ್ಷತೆ ವಹಿಸಿದ್ದರು. ಪ್ರಾಸ್ತಾವಿಕವಾಗಿ ಮಾತನಾಡಿದ ಯೋಜನಾಧಿಕಾರಿ ಡಾ. ಸಂಗಪ್ಪ ಮಾಮನಶೆಟ್ಟಿ ಸ್ವಾಗತಿಸಿದರು. ಹೈದರ ಅಲಿ ನಿರೂಪಿಸಿದರು. ದಶರಥ ಬಿರಾಪೂರ ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.