ದೇಶವ್ಯಾಪಿ ಮುಷ್ಕರಕ್ಕೆ ಕರೆ

7

ದೇಶವ್ಯಾಪಿ ಮುಷ್ಕರಕ್ಕೆ ಕರೆ

Published:
Updated:

ಬೆಂಗಳೂರು: `ದೇಶಕ್ಕೆ ಸ್ವಾತಂತ್ರ ಬಂದ ನಂತರ ಇದೇ ಮೊದಲ ಬಾರಿಗೆ ದೇಶದ ಎಲ್ಲಾ ಕಾರ್ಮಿಕ ಸಂಘಗಳು ಒಂದೇ ವೇದಿಕೆಗೆ ಬಂದು `ದೇಶದ ದುಡಿಯುವ ಜನರ ಸಂಕಷ್ಟಗಳ ಪರಿಹಾರಕ್ಕಾಗಿ ಫೆಬ್ರುವರಿ 28ರ ಸೋಮವಾರ ದೇಶವ್ಯಾಪಿ ಮುಷ್ಕರಕ್ಕೆ ಕರೆ ಕೊಟ್ಟಿದೆ~ ಎಂದು  ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಮಹಾಂತೇಶ್ ತಿಳಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ  ಕೃಷಿ ಮಾರುಕಟ್ಟೆ ಮತ್ತಿತರ ಕಡೆ ಸುಮಾರು ಐದು ಲಕ್ಷಕ್ಕಿಂತ ಅಧಿಕ  ಕಾರ್ಮಿಕರು ಹತ್ತಾರು ವರ್ಷಗಳಿಂದ ಭಾರವಾದ ಮೂಟೆಗಳನ್ನು  ಹೊರುತ್ತಾ ಯಾವುದೇ ಒಂದು ಕನಿಷ್ಠ ಸೌಲಭ್ಯಗಳಿಲ್ಲದೆ ದುಡಿಯು ತ್ತಿದ್ದಾರೆ. ಈ ಕಾರ್ಮಿಕರ ಬಗ್ಗೆ ಹಲ ವಾರು ಬಾರಿ ಹೋರಾಟ ಮಾಡಿ ದರೂ ಯಾವುದೇ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry