ಭಾನುವಾರ, ಏಪ್ರಿಲ್ 11, 2021
22 °C

ದೇಶವ್ಯಾಪಿ ಸೇವೆ: ಸಹಕಾರ ಬ್ಯಾಂಕ್‌ಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ದೇಶದ ಎಲ್ಲ ಪಟ್ಟಣ ಸಹಕಾರ ಬ್ಯಾಂಕ್‌ಗಳು ಒಟ್ಟಾಗಿ ರಾಷ್ಟ್ರೀಕೃತ ಬ್ಯಾಂಕ್‌ಗಳ ಜತೆ ಹೊಂದಾಣಿಕೆ ಮಾಡಿಕೊಂಡು ಸಹಕಾರ ಬ್ಯಾಂಕ್ ಗ್ರಾಹಕರಿಗೆ ದೇಶವ್ಯಾಪಿ ಸೇವೆ ಒದಗಿಸುವ ಚಿಂತನೆ ಮಾಡಬೇಕಾಗಿದೆ ಎಂದು ಪಟ್ಟಣ ಬ್ಯಾಂಕುಗಳ ಮಹಾಮಂಡಲದ ಅಧ್ಯಕ್ಷ ಎಚ್.ಕೆ.ಪಾಟೀಲ್ ಸಲಹೆ ನೀಡಿದರು.ನಗರದ ಜಿಲ್ಲಾ ಮಹಿಳಾ ಸಹಕಾರ ಬ್ಯಾಂಕ್‌ನ ದಶಮಾನೋತ್ಸವ ನೆನಪಿನ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.ದೇಶದಲ್ಲಿ ಒಟ್ಟು 16,144 ಪಟ್ಟಣ ಸಹಕಾರ ಬ್ಯಾಂಕ್‌ಗಳಿವೆ. ಈ ಬ್ಯಾಂಕ್‌ಗಳು ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಮೂಲಕ ಒಟ್ಟಾಗಿ ರಾಷ್ಟ್ರೀಕೃತ ಬ್ಯಾಂಕುಗಳ ಜೊತೆ ಹೊಂದಾಣಿಕೆ ಮಾಡಿಕೊಂಡರೆ ಯುವ ಜನಾಂಗವನ್ನು ಆಕರ್ಷಿಸಬಹುದು ಎಂದು ಅವರು ಅಭಿಪ್ರಾಯಪಟ್ಟರು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಕೆಲವು ನಿರ್ಧಾರಗಳಿಂದ ಸಹಕಾರಿ ಬ್ಯಾಂಕುಗಳನ್ನು ನಿಸ್ತೇಜಗೊಳಿಸುತ್ತಿವೆ. ಬ್ಯಾಂಕ್‌ಗಳು ಗಳಿಸುವ ಲಾಭದ ಮೇಲೆ ಹೆಚ್ಚಿನ ತೆರಿಗೆ ವಿಧಿಸುವ ಮೂಲಕ ಬ್ಯಾಂಕ್‌ಗಳ ಬೆಳವಣಿಗೆಗೆ ಕಂಟಕಪ್ರಾಯವಾಗುವ ನೀತಿ ಜಾರಿ ಮಾಡುತ್ತಿವೆ. ಈ ಬಗ್ಗೆ ಸಹಕಾರಿ ಕ್ಷೇತ್ರ ದೊಡ್ಡ ಮಟ್ಟದಲ್ಲಿ ದನಿ ಎತ್ತಬೇಕು ಎಂದು ಅವರು ಕರೆ ನೀಡಿದರು.ಪ್ರಾದೇಶಿಕ ಸಹಕಾರ ಸಂಘಗಳ ಆಡಳಿತ ಸಂಸ್ಥೆ ಅಧ್ಯಕ್ಷ ಬಿ.ಎಸ್. ವಿಶ್ವನಾಥ್, ಬೆಂಗಳೂರಿನ ನಾರತ್ನರಾವ್ ಸಭಾಂಗಣ ಉದ್ಘಾಟಿಸಿ ಮಾತನಾಡಿದರು. ಮಹಿಳಾ ಸಹಕಾರ ಬ್ಯಾಂಕಿನ ಅಧ್ಯಕ್ಷೆ ಬಿ.ಸಿ. ಗೀತಾ ಅಧ್ಯಕ್ಷತೆ ವಹಿಸಿದ್ದರು. ಬ್ಯಾಂಕಿನ ವ್ಯವಸ್ಥಾಪಕ ಬಿ.ಆರ್. ಸತೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.