ಸೋಮವಾರ, ಮೇ 23, 2022
30 °C

`ದೇಶ ಪ್ರಗತಿಗೆ ಪ್ರಾಥಮಿಕ ಶಿಕ್ಷಣ ಭದ್ರ ಬುನಾದಿ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಂಪ್ಲಿ: ರಾಷ್ಟ್ರದ ಅಭಿವೃದ್ಧಿಗೆ ಪ್ರಾಥಮಿಕ ಶಿಕ್ಷಣ ತಳಹದಿ ಎಂದು ಹೊಸಪೇಟೆ ಡಾನ್ ಬಾಸ್ಕೋ ಸಂಸ್ಥೆ ಉಪ ನಿರ್ದೇಶಕ  ಸಿಜ್ಜು ಅಭಿಪ್ರಾಯಪಟ್ಟರು. ಎಂ.ಡಿ ಕ್ಯಾಂಪ್ ಸಿಂಧೋಳ್ಳು ಕಾಲೊನಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಹೊಸಪೇಟೆ ಡೋನ್ ಬೋಸ್ಕೊ ಸಂಸ್ಥೆ ಶುಕ್ರವಾರ ಹಮ್ಮಿಕೊಂಡಿದ್ದ `ಮುಕ್ತ ಸಂವಾದ' ಸಮುದಾಯ ಕಾರ್ಯಕ್ರಮದಲ್ಲಿ ಮಾತನಾಡಿದರು.ಶಿಕ್ಷಕರು ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಭವಿಷ್ಯದಲ್ಲಿ ಉತ್ತಮ ನಾಗರಿಕರನ್ನಾಗಿ ರೂಪಿಸಬೇಕು. ಅಲೆಮಾರಿ ಕುಟುಂಬಗಳಿಗೆ ಸೂಕ್ತ ನೆಲೆ ಒದಗಿಸುವಂತೆ ಆಗ್ರಹಿಸಿದರು. ಜಿಲ್ಲಾ ಗುಡಾರ ಗುಡಿಸಲು ನಿವಾಸಿಗಳ ಕಲ್ಯಾಣ ಸಂಘದ ಗೌರವಾಧ್ಯಕ್ಷ ಜಿ. ಮಾಧವರಾವ್ ಕಾರ್ಯಕ್ರಮ ಉದ್ಘಾಟಿಸಿದರು.

ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಮಂಜುನಾಥ, ಪುರಸಭೆ ಸದಸ್ಯರಾದ ರಾಜಾಸಾಬ್, ಸಣ್ಣ ಹುಲುಗಪ್ಪ, ಶಿಕ್ಷಣ ಇಲಾಖೆ ಸಂಪನ್ಮೂಲ ವ್ಯಕ್ತಿ ಮಹ್ಮದ್ ಇಸಾಕ್, ಮುಖ್ಯಶಿಕ್ಷಕ ಸಿದ್ದೇಶ, ಸಿಂಧೋಳ್ಳು ಸಮಾಜದ ಕಾರ್ಯದರ್ಶಿ ಯಲ್ಲಪ್ಪ, ಚೈಲ್ಡ್ ಲೈನ್ ಜಿಲ್ಲಾ ಸಂಯೋಜಕ ಮಂಜುನಾಥ ಇತರರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಯಿತು. ಸೈಯ್ಯದ್ ಅಯ್ಯರ್ ಸ್ವಾಗತಿಸಿದರು. ಚಿದಾನಂದ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.