ಚಾಮರಾಜನಗರ: ಭಾರತದ ಏಕತೆಗೆ ಧಕ್ಕೆ ತರುವ ಮತ್ತು ಭಾರತೀಯ ಸೈನ್ಯದ ವಿರುದ್ಧ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಬುಧವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಯಿತು.

ಪಚ್ಚಪ್ಪ ವೃತ್ತದಿಂದ ಬಿ. ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನದವರೆಗೆ ಮೆರವಣಿಗೆ ನಡೆಸಿದ ಪರಿಷತ್ನ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು, ರಾಜ್ಯ ಸರ್ಕಾರ ಮತ್ತು ಗೃಹ ಸಚಿವರ ವಿರುದ್ಧ ಘೋಷಣೆ ಕೂಗಿದರು.

ಬೆಂಗಳೂರಿನ ದಿ. ಯುನೈಟೆಡ್ ಥಿಯೋಲಾಜಿಕಲ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಶದ್ರೋಹಿ ಘೋಷಣೆ ಕೂಗಲಾಗಿದೆ. ಆದರೆ, ತಪ್ಪಿತಸ್ಥರನ್ನು ಬಂಧಿಸುವಲ್ಲಿ ಸರ್ಕಾರ ಮತ್ತು ಪೊಲೀಸ್ ಇಲಾಖೆಯು ಸಂಪೂರ್ಣವಾಗಿ ವಿಫಲವಾಗಿದೆ ಎಂದು ದೂರಿದರು.

ಸರ್ಕಾರ ಸ್ವಯಂಪ್ರೇರಿತವಾಗಿ ದೂರು ಕೂಡ ದಾಖಲಿಸಿಲ್ಲ. ಎಬಿವಿಪಿ ದೂರು ನೀಡಿದರೂ ಎರಡು ದಿನದ ಬಳಿಕ ಎಫ್ಐಆರ್ ದಾಖಲಿಸಲಾಗಿದೆ. ಆದರೆ, ಇಲ್ಲಿಯವರೆಗೆ ತಪ್ಪಿತಸ್ಥರನ್ನು ಬಂಧಿಸಿಲ್ಲ ಎಂದು ದೂರಿದರು.

ಸರ್ಕಾರದ ಧೋರಣೆ ಖಂಡಿಸಿ ಹೋರಾಟ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅಮಾನುಷವಾಗಿ ವರ್ತಿಸಿದ್ದಾರೆ. ಈ ಘಟನೆಯು ಜನತಂತ್ರ ವ್ಯವಸ್ಥೆಯನ್ನು ಅಣಕಿಸುವಂತಿದೆ ಎಂದು ಆರೋಪಿಸಿದರು.

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಒಡೆತನದಲ್ಲಿರುವ ತುಮಕೂರಿನ ಎಸ್ಎಸ್ಐಟಿ ಕಾಲೇಜಿನಲ್ಲಿಯೂ ಕೆಲವು ವಿದ್ಯಾರ್ಥಿಗಳು ದೇಶದ ವಿರುದ್ಧ ಘೋಷಣೆ ಕೂಗಿದ್ದಾರೆ. ವಿದ್ಯಾರ್ಥಿಗಳನ್ನು ಬಂಧಿಸಿರುವ ಪೊಲೀಸರು ಅವರ ವಿರುದ್ಧ ಯಾವುದೇ ದೂರು ದಾಖಲಿಸಿಲ್ಲ ಎಂದು ಟೀಕಿಸಿದರು.

ದೇಶದ ಏಕತೆಗೆ ಧಕ್ಕೆ ತಂದಿರುವ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಮತ್ತು ಥಿಯೋಲಾಜಿಕಲ್ ಕಾಲೇಜಿನ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಈ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು. ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು. ಭಾರತದಲ್ಲಿ ಆಮ್ನೆಸ್ಟಿ ಇಂಟರ್ನ್ಯಾಷನಲ್ ಸಂಸ್ಥೆಯನ್ನು ನಿಷೇಧಿಸಬೇಕು. ಜತೆಗೆ, ಸಂಸ್ಥೆಯ ಪದಾಧಿಕಾರಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಪರಿಷತ್ನ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮುರಳಿ, ಜಿಲ್ಲಾ ಸಂಚಾಲಕ ಮನೋಜ್ ಸೇರಿದಂತೆ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಗ್ರೀನ್ಬಡ್ಸ್ ಆಸ್ತಿ ಹರಾಜಿಗೆ ಆಗ್ರಹ
ಚಾಮರಾಜನಗರ: ಗ್ರೀನ್ಬಡ್ಸ್ ಆಸ್ತಿ ಹರಾಜು ವಿಳಂಬ ಖಂಡಿಸಿ ನಗರದಲ್ಲಿ ಬುಧವಾರ ಜಿಲ್ಲಾ ಗ್ರೀನ್ಬಡ್ಸ್ ಕಾರ್ಯಕರ್ತರು ಮತ್ತು ಠೇವಣಿದಾರರ ರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಯಿತು.

ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗದಿಂದ ಮೆರವಣಿಗೆ ಆರಂಭಿಸಿದ ಕಾರ್ಯಕರ್ತರು ಮತ್ತು ಠೇವಣಿದಾರರು, ಬಿ. ರಾಚಯ್ಯ ಜೋಡಿರಸ್ತೆ ಮಾರ್ಗವಾಗಿ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದರು.

ಗ್ರೀನ್ಬಡ್ಸ್ ಸಂಸ್ಥೆಯು ರಾಜ್ಯದ 5 ಲಕ್ಷ ಜನರಿಂದ ₹ 350 ಕೋಟಿ ಸಂಗ್ರಹಿಸಿದೆ. ಕಾರ್ಯಕರ್ತರು ಮತ್ತು ಠೇವಣಿದಾರರ ಒತ್ತಾಯದ ಪರಿಣಾಮ ಸಿಐಡಿಯು ಕಂಪೆನಿಯ ಮೋಸದ ಬಗ್ಗೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಆದರೆ, ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ ಎಂದು ದೂರಿದರು.

ಜಿಲ್ಲಾ ವ್ಯಾಪ್ತಿಯಲ್ಲಿ ಈ ಕಂಪೆನಿಗೆ ಸೇರಿದ ಕಟ್ಟಡಗಳ ಹರಾಜಿನ ಬಗ್ಗೆ ಸರಿಯಾದ ವರದಿ ನೀಡಿಲ್ಲ. ಜಿಲ್ಲಾಡಳಿತವು ಹರಾಜು ಪ್ರಕ್ರಿಯೆಗೆ ವಿಳಂಬ ಧೋರಣೆ ತಳೆದಿರುವ ಪರಿಣಾಮ ಠೇವಣಿದಾರರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಟೀಕಿಸಿದರು.

ಕೂಡಲೇ, ಜಿಲ್ಲಾಡಳಿತವು ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ತ್ವರಿತವಾಗಿ ಕಂಪೆನಿಗೆ ಸೇರಿದ ಆಸ್ತಿಯ ಹರಾಜು ಪ್ರಕ್ರಿಯೆ ಆರಂಭಿಸಿ ಠೇವಣಿದಾರರಿಗೆ ಹಣ ವಾಪಸ್ ಕೊಡಿಸಬೇಕು ಎಂದು ಆಗ್ರಹಿಸಿದರು.

ಗ್ರೀನ್ಬಡ್ಸ್ ಕಂಪೆನಿಯ ಮೋಸದಿಂದ ಹಣ ಪಾವತಿಸಿದ್ದ 15ಕ್ಕೂ ಹೆಚ್ಚು ಯುವಕ, ಯುವತಿಯರು ಪ್ರಾಣ ಕಳೆದುಕೊಂಡಿದ್ದಾರೆ. ಮುಗ್ಧ ಮಹಿಳೆಯರು ಸಾವಿರಾರು ರೂಪಾಯಿ ನಷ್ಟ ಅನುಭವಿಸಿದ್ದಾರೆ. ಇದರಿಂದ ಕುಟುಂಬದ ನಿರ್ವಹಣೆಗೆ ಸಮಸ್ಯೆಯಾಗಿದೆ. ಕೂಡಲೇ, ಸರ್ಕಾರ ಮಧ್ಯಪ್ರವೇಶಿಸಿ ಕಂಪೆನಿಗೆ ಸೇರಿದ ಆಸ್ತಿಯ ಹರಾಜು ನಡೆಸಿ ಠೇವಣಿದಾರರಿಗೆ ಹಣ ವಾಪಸ್ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ಸಂಚಾಲಕ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಜಿಲ್ಲಾ ಗ್ರೀನ್ಬಡ್ಸ್ ಕಾರ್ಯಕರ್ತರು ಮತ್ತು ಠೇವಣಿದಾರರ ರಕ್ಷಣಾ ಸಮಿತಿಯ ಅಧ್ಯಕ್ಷ ಷಡಕ್ಷರ ಸ್ವಾಮಿ, ಸಿದ್ದರಾಜು, ಬಂಗಾರಪ್ಪ, ಮಹದೇವಸ್ವಾಮಿ, ಕೃಷ್ಣರಾಜು, ಶ್ರೀಕಂಠ, ಮಹದೇವನಾಯಕ ಸೇರಿದಂತೆ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.