ಮಂಗಳವಾರ, ನವೆಂಬರ್ 19, 2019
22 °C

ದೊಡ್ಡಬಳ್ಳಾಪುರ ಚೆಕ್‌ಪೋಸ್ಟ್‌ನಲ್ಲಿ 5 ಲಕ್ಷ ನಗದು ವಶ

Published:
Updated:

ದೊಡ್ಡಬಳ್ಳಾಪುರ: ಬೆಂಗಳೂರಿನಿಂದ ದೊಡ್ಡಬಳ್ಳಾಪುರ ಮಾರ್ಗವಾಗಿ  ಗೌರಿಬಿದನೂರಿಗೆ ಕಾರಿನಲ್ಲಿ  ತೆಗೆದುಕೊಂಡು ಹೋಗುತ್ತಿದ್ದ 5 ಲಕ್ಷ ರೂ.ಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ಚೆಕ್‌ಪೋಸ್ಟ್ ಬಳಿ ತಪಾಸಣೆ ಸಮಯದಲ್ಲಿ ಪೊಲೀಸರಿಗೆ ಈ ಹಣ ಪತ್ತೆಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮಿನಾರಾಯಣ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)