ದೊಡ್ಡಬಳ್ಳಾಪುರ: ಬರ ಪೀಡಿತವೆಂದು ಘೋಷಿಸಲು ಆಗ್ರಹ

7

ದೊಡ್ಡಬಳ್ಳಾಪುರ: ಬರ ಪೀಡಿತವೆಂದು ಘೋಷಿಸಲು ಆಗ್ರಹ

Published:
Updated:

ದೊಡ್ಡಬಳ್ಳಾಪುರ: `ಮಳೆ ಆಧಾರಿತ ಕೃಷಿಯೇ ಹೆಚ್ಚಾಗಿರುವ ತಾಲ್ಲೂಕಿನಲ್ಲಿ ಮಳೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ ಎಂದು ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಎಚ್.ಅಪ್ಪಯ್ಯಣ್ಣ ಆತಂಕ ವ್ಯಕ್ತಪಡಿಸಿದ್ದಾರೆ. ಭಾನುವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಕೂಡಲೇ ಸರ್ಕಾರವು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡುವ ಮೂಲಕ ರೈತರ ನೆರವಿಗೆ ಮುಂದಾಗಬೇಕು~ ಎಂದು ಆಗ್ರಹಿಸಿದ್ದಾರೆ.`ಕೃಷಿ ಇಲಾಖೆ ಸರ್ಕಾರಕ್ಕೆ ಸೂಕ್ತ ಮಾಹಿತಿ ನೀಡದೆ ಹಾಗೂ ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರದ ಮೇಲೆ ಒತ್ತಡ ತರುವ ಮೂಲಕ ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿಸುವಲ್ಲಿ ವಿಫಲರಾಗಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜೆಡಿಎಸ್ ಪಕ್ಷದ ನಿಯೋಗ ಮನವಿ ಸಲ್ಲಿಸಲಿದೆ~ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry