ಗುರುವಾರ , ಮೇ 13, 2021
39 °C

ದೊಮ್ಮಸಂದ್ರ: 2 ಡೆಂಗೆ ಪ್ರಕರಣ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವೈಟ್‌ಫೀಲ್ಡ್: ಇಲ್ಲಿಗೆ ಸಮೀಪದ ಸರ್ಜಾಪುರ ರಸ್ತೆಯ ದೊಮ್ಮಸಂದ್ರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಇಬ್ಬರಿಗೆ ಡೆಂಗೆ ಜ್ವರ ಇರುವುದು ಪತ್ತೆಯಾಗಿದೆ.



`ದೊಮ್ಮಸಂದ್ರ ಗ್ರಾಮದ ವಾಣಿ ಎಂಬವರು ಇಲ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮತ್ತು ಕೊಮ್ಮಸಂದ್ರ ಗ್ರಾಮದ ಶ್ರಾವ್ಯ ಎಂಬುವರು ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ' ಎಂದು ಆರೋಗ್ಯ ಕೇಂದ್ರದ ವೈದ್ಯ ಸಿದ್ಧಾರ್ಥ ತಿಳಿಸಿದರು.



ನಿರ್ಲಕ್ಷ್ಯ: `ಗ್ರಾಮದಲ್ಲಿ ಇತ್ತೀಚೆಗೆ ಸಮರ್ಪಕ ಕಸ ವಿಲೇವಾರಿ ಆಗುತ್ತಿಲ್ಲ. ಕಸವನ್ನು ಕೆರೆಯ ಅಂಗಳದಲ್ಲೇ ಸುರಿಯಲಾಗುತ್ತಿದೆ. ಎಲ್ಲೆಂದರಲ್ಲಿ ಕಸ ಹಾಕುವುದರಿಂದ ರೋಗ ಹರಡುವ ಭೀತಿ ಉಂಟಾಗಿದೆ.



 ಇದಕ್ಕೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪಂಚಾಯ್ತಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ' ಎಂದು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷೆ ಉಷಾ ನಾಗರಾಜು ಆರೋಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.