ದೊರೆಯದ ಸಂಬಳಕಿಂಗ್‌ಫಿಷರ್ ಏರ್‌ಲೈನ್ಸ್ ಉದ್ಯೋಗಿ ಪತ್ನಿ ಆತ್ಮಹತ್ಯೆ

7

ದೊರೆಯದ ಸಂಬಳಕಿಂಗ್‌ಫಿಷರ್ ಏರ್‌ಲೈನ್ಸ್ ಉದ್ಯೋಗಿ ಪತ್ನಿ ಆತ್ಮಹತ್ಯೆ

Published:
Updated:

ನವದೆಹಲಿ (ಐಎಎನ್‌ಎಸ್): ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಕಿಂಗ್‌ಫಿಷರ್ ಏರ್‌ಲೈನ್ಸ್ ಉದ್ಯೋಗಿಯ ಪತ್ನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ಪಾಲಂ ಬಡಾವಣೆಯಲ್ಲಿ ಗುರುವಾರ ನಡೆದಿದೆ.ಮಾನಸ್ ಚಕ್ರವರ್ತಿ ಎಂಬುವರ ಪತ್ನಿ ಸುಷ್ಮಿತಾ ಚಕ್ರವರ್ತಿ (45) ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾರೆ. ತಮ್ಮ ಪತಿಗೆ ಕಳೆದ ನಾಲ್ಕೈದು ತಿಂಗಳಿನಿಂದ ಸಂಸ್ಥೆ ವೇತನ ನೀಡದ ಕಾರಣ ತೀವ್ರ ಆರ್ಥಿಕ ಮುಗ್ಗಟ್ಟಿನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ರ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry