ದೌರ್ಜನ್ಯ: ಕ್ರಮಕ್ಕೆ ದಸಂಸ ಆಗ್ರಹ

7

ದೌರ್ಜನ್ಯ: ಕ್ರಮಕ್ಕೆ ದಸಂಸ ಆಗ್ರಹ

Published:
Updated:

ಬೆಂಗಳೂರು: `ದಲಿತ ಸಮುದಾಯಗಳ ಮೇಲೆ ರಾಜ್ಯದಲ್ಲಿ ನಡೆಯುತ್ತಿರುವ ದೌರ್ಜನ್ಯಕ್ಕೆ ಕಾರಣರಾಗಿರುವ ವ್ಯಕ್ತಿಗಳನ್ನು ಬಂಧಿಸಲು ಸರ್ಕಾರ ಕೂಡಲೇ ಕ್ರಮ ತೆಗೆದುಕೊಳ್ಳಬೇಕು~ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯ ಘಟಕದ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಇಲ್ಲಿ ಆಗ್ರಹಿಸಿದರು.ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಧಾರವಾಡ , ಮಂಡ್ಯ ಜಿಲ್ಲೆಯಲ್ಲಿ ಈಚೆಗೆ ಕೆಲ ದಿನಗಳಿಂದ ದಲಿತರ ಮೇಲೆ ನಿರಂತರ ಹಲ್ಲೆ ನಡೆಯುತ್ತಿವೆ. ಮಂಡ್ಯ ಜಿಲ್ಲೆಯ ನಾಗಮಂಗಲ, ಕಿರಗಾವಲುಗಳಲ್ಲಿ  ಗ್ರಾಮದಿಂದ ಬಹಿಷ್ಕರಿಸಲಾಗಿದೆ. ಅಲ್ಲಿನ ಜಿಲ್ಲಾಧಿಕಾರಿಗಳಾಗಲೀ, ಇತರೆ ಅಧಿಕಾರಿಗಳಾಗಲೀ ಕ್ರಮ ತೆಗೆದುಕೊಂಡಿಲ್ಲ. ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು~ ಎಂದು ಒತ್ತಾಯಿಸಿದರು.ಈ ಸಂಬಂಧ ಮಂಡ್ಯದಲ್ಲಿ ಇದೇ 25 ರಂದು ದಲಿತರ ಮೇಲೆ ನಡೆಯುತ್ತಿರುವ ಹಲ್ಲೆ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry