ಗುರುವಾರ , ಮೇ 13, 2021
35 °C

ದೌರ್ಜನ್ಯ: ಕ್ರೈಸ್ತರ ರಕ್ಷಣಾ ವೇದಿಕೆ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು:  ಕ್ರೈಸ್ತರ ಮೇಲಿನ ದೌರ್ಜನ್ಯ ಖಂಡಿಸಿ ಕರ್ನಾಟಕ ಕ್ರೈಸ್ತರ ರಕ್ಷಣಾ ವೇದಿಕೆ ನೇತೃತ್ವದಲ್ಲಿ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.ಹಳೆ ತಾಲ್ಲೂಕು ಕಚೇರಿ ಆವರಣದಿಂದ ಮೆರವಣಿಗೆ ಹೊರಟು, ಮಹಾತ್ಮ ಗಾಂಧಿ ರಸ್ತೆಯಲ್ಲಿ ತೆರಳಿದ ಪ್ರತಿಭಟನಾಕಾರರು, ನಂತರ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸಿದರು. ಉಪ ವಿಭಾಗಾಧಿಕಾರಿ ದಯಾನಂದ ಅವರಿಗೆ ಮನವಿಪತ್ರ ಸಲ್ಲಿಸಿ ದೌರ್ಜನ್ಯ ತಡೆಗಟ್ಟಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭ ಮಾತನಾಡಿದ ವೇದಿಕೆ ಜಿಲ್ಲಾ ಕಾರ್ಯದರ್ಶಿ ಶ್ರೀಧರ ಸ್ಯಾಮುವೆಲ್ ಮತ್ತು ನಿರ್ದೇಶಕ ವರ್ಗೀಶ್, ಕ್ರೈಸ್ತರಿಗೆ ತೊಂದರೆ ಕೊಡುವರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸ್ವತಂತ್ರವಾಗಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.ಕ್ರೈಸ್ತರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು. ಪ್ರಾರ್ಥನಾ ಮಂದಿರ ಇಲ್ಲದ ಸ್ಥಳಗಳಲ್ಲಿ ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಲು ಅವಕಾಶ ಮಾಡಿಕೊಡಬೇಕು. ಸೂಕ್ತ ರಕ್ಷಣೆಯನ್ನೂ ನೀಡಬೇಕು ಎಂದು ಮನವಿ ಮಾಡಿದರು.ಯಾವುದೇ ಧರ್ಮ ಸ್ವೀಕರಿಸಲು, ಆಚರಿಸಲು, ಪ್ರಚುರಪಡಿಸಲು ಅವಕಾಶ ಮಾಡಿಕೊಡಬೇಕು. 2008ರಿಂದ ಕ್ರೈಸ್ತರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಉದ್ದೇಶಪೂರ್ವಕವಾಗಿ ತೊಂದರೆ ನೀಡುವ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು. ಕೋಮುವಾದಿ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಪ್ರತಿಭಟನಾಗಾರರು ಒತ್ತಾಯಿಸಿದರು.ಕ್ರೈಸ್ತರ ರಕ್ಷಣಾ ವೇದಿಕೆ ರಾಜ್ಯ ಸಂಘಟನಾ ಕಾರ್ಯದರ್ಶಿ ಸುರೇಶ್ ಜಾಕೋಬ್, ಜಿಲ್ಲಾಧ್ಯಕ್ಷ ಜೋಸೆಫ್ ಮತ್ತಿತರರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.