ದೌರ್ಜನ್ಯ ಖಂಡಿಸಿ ಪ್ರತಿಭಟನೆ

7

ದೌರ್ಜನ್ಯ ಖಂಡಿಸಿ ಪ್ರತಿಭಟನೆ

Published:
Updated:

ಹಾಸನ: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಗದ್ಯಾಳ ಗ್ರಾಮದಲ್ಲಿ ನಡೆದಿರುವ ದಲಿತರ ಸಾಮೂಹಿಕ ಬಹಿಷ್ಕಾರ ಮತ್ತು ಅಂಬೇಡ್ಕರ್‌ ಭಾವಚಿತ್ರಕ್ಕೆ ಸಗಣಿ ಬಳಿದಿರುವ ಘಟನೆಯನ್ನು ವಿರೋಧಿಸಿ ಹಾಗೂ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ಸಿ.ಪಿ.ಐ.ಎಂ. ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ‘ರಾಜ್ಯದಲ್ಲಿ ಈಚೆಗೆ ದಲಿರ ಸಾಮಾಜಿಕ ಬಹಿಷ್ಕಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ದಲಿತರಿಗೆ ಯಾವುದೇ ರೀತಿಯ ಸೌಲಭ್ಯ ದೊರೆಯುತ್ತಿಲ್ಲ ಮತ್ತು ಪ್ರಕರಣಗಳ ಆರೋಪಿಗಳಿಗೆ ಕಠಿಣ ಕಾನೂನು ಕ್ರಮ ಜಾರಿಯಾಗುತ್ತಿಲ್ಲ. ರಾಜ್ಯ ಸರ್ಕಾರ ದೌರ್ಜನ್ಯಕ್ಕೆ ಒಳಗಾದ ಕುಟುಂಬಗಳಿಗೆ ಸೂಕ್ತ ಕಾನೂನು ರಕ್ಷಣೆ ನೀಡದೆ ದಲಿತ ಸಮುದಾಯ ಕಡೆಗಣಿಸಲಾಗುತ್ತಿದೆ’ ಎಂದು ಆರೋಪಿಸಿದರು. ಪರಿಶಿಷ್ಟ ಜಾತಿ/ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಶೇ.7 ರಷ್ಟು ಉದ್ಯೋಗ ಮತ್ತು ಶೈಕ್ಷಣಿಕ ವಲಯದಲ್ಲಿ ಮೀಸಲಾತಿಯನ್ನು ರಾಜ್ಯದಲ್ಲಿ ಜಾರಿಗೆ ತರಬೇಕು. ಹಾಲಿ ಶೇ.3 ರಷ್ಟು ಮಾತ್ರವೇ ಮೀಸಲಾತಿ ಇದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಶೇ.7 ರಷ್ಟು ಮೀಸಲಾತಿ ಹೆಚ್ಚಿಸಬೇಕು ಎಂದರು.ಸಿ.ಪಿ.ಐ.ಎಂ. ಜಿಲ್ಲಾ ಮುಖಂಡ ಧರ್ಮೇಶ್‌, ಎಸ್‌.ಎಫ್‌.ಐ. ಜಿಲ್ಲಾ ಘಟಕದ ಅಧ್ಯಕ್ಷ ಎಂ.ಜಿ. ಪೃಥ್ವಿ, ಮಾದಿಗ ದಂಡೋರ ಅಧ್ಯಕ್ಷ ಟಿ.ಆರ್‌. ವಿಜಯ ಕುಮಾರ್‌, ತಾಲ್ಲೂಕು ಘಟಕದ ಅಧ್ಯಕ್ಷ ರವಿ ಕುಮಾರ್‌, ದಲಿತ ಹಕ್ಕುಗಳ ಸಮಿತಿ ಸದಸ್ಯ ಕೆ.ಎಸ್‌. ಮಂಜುನಾಥ್‌, ಅರವಿಂದ್‌ ಹಾಜರಿದ್ದರು.ಧನ ಸಹಾಯಕ್ಕೆ ಅರ್ಜಿ ಆಹ್ವಾನ

ಹಾಸನ: ಕೊಲ್ಕತ್ತಾದ ರಾಜಾರಾಮ ಮೋಹನರಾಯ್ ಗ್ರಂಥಾಲಯ ಪ್ರತಿಷ್ಠಾನದವರು ಸಾರ್ವಜನಿಕ ಗ್ರಂಥಾಲಯ ಸೇವೆ ಒದಗಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಿಗೆ ಹೊಂದಾಣಿಕೇತರ ನೆರವು ಧನ ಸಹಾಯ ಯೋಜನೆಯಡಿ ನೀಡುವ 13-–14ನೇ ಸಾಲಿನ ಧನ ಸಹಾಯಕ್ಕೆ  ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾರ್ವಜನಿಕ ಗ್ರಂಥಾಲಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಿಗೆ ಪುಸ್ತಕಗಳು, ಪೀಠೋಪಕರಣ ಹಾಗೂ ಸಲಕರಣೆ ಖರೀದಿಸಲು,  ಕಟ್ಟಡ ಅಭಿವೃದ್ಧಿಪಡಿಸಲು ಹೆಚ್ಚುವರಿ ನಿರ್ಮಾಣ ಸೇರಿದಂತೆ ಕಾಮಗಾರಿಗಳಿಗೆ ಧನ ಸಹಾಯ ಮಾಡುವುದು ಈ ಯೋಜನೆಯ ಉದ್ದೇಶ.ಅರ್ಹ ಸ್ವಯಂ ಸೇವಾ ಸಂಸ್ಥೆಗಳು ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯದಿಂದ ನಿಗದತ ಅರ್ಜಿ ನಮೂನೆ ಪಡೆದು ಜ.15ರೊಳಗೆ ಅಗತ್ಯ ದಾಖಲೆಗಳೊಂದಿಗೆ ಭರ್ತಿಮಾಡಿ ಸಲ್ಲಿಸಬಹುದು.  ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೇಂದ್ರ ಗ್ರಂಥಾಲಯ ಸಂಪರ್ಕಿಸಲು ಕೋರಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry