ಭಾನುವಾರ, ಜನವರಿ 19, 2020
22 °C
ಗೃಹಸಚಿವ ಕೆ.ಜೆ.ಜಾರ್ಜ್‌ ಹೇಳಿಕೆ

ದೌರ್ಜನ್ಯ ತಡೆಗಟ್ಟಲು ಕ್ರಮ

'ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಹಂಕ: ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯದಂತಹ ಕೆಲವು ಪ್ರಕರಣಗಳು ನಡೆಯುತ್ತಿದ್ದು, ಇಂತಹ ಪ್ರಕರಣಗಳನ್ನು ಸಂಪೂರ್ಣ ವಾಗಿ ಹತೋಟಿಗೆ ತರಲು ಯತ್ನಿಸ ಲಾಗುತ್ತಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್‌ ಹೇಳಿದರು.ಇಲ್ಲಿನ ಉಪನಗರ ಪೊಲೀಸ್‌ ಠಾಣೆ ಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಇಂತಹ ಪ್ರಕರಣ ಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗಾಗಲೇ ಹತ್ತು ತ್ವರಿತ ನ್ಯಾಯಾಲಯ  ಸ್ಥಾಪನೆಮಾಡಿದೆ ಎಂದರು.ಕೇಂದ್ರ ಪೆಟ್ರೋಲಿಯಂ ಸಚಿವ ಎಂ.ವೀರಪ್ಪ ಮೊಯಿಲಿ ಮಾತನಾಡಿ, ಜನಪ್ರತಿನಿಧಿಗಳು ತಮಗೆ ಪೊಲೀಸರು ನೀಡುವ ಗೌರವವನ್ನು ದುರುಪಯೋಗ ಮಾಡಿಕೊಳ್ಳಬಾರದು ಎಂದರು.ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಶಾಸಕರಾದ ಎಸ್‌.ಆರ್‌. ವಿಶ್ವ ನಾಥ್‌, ಗೋವಿಂದರಾಜ್‌, ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಲಾಲ್‌ ರೋಕುಮ ಪಚಾವೊ, ರಾಜ್ಯ ಪೊಲೀಸ್‌ ಗೃಹನಿರ್ಮಾಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್‌ ಸೂದ್‌, ನಗರ ಪೊಲೀಸ್‌ ಕಮಿಷನರ್‌ ರಾಘವೇಂದ್ರ ಔರಾದ್‌ಕರ್‌ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)