ಶುಕ್ರವಾರ, ಮೇ 7, 2021
19 °C

ದ್ವಿತೀಯ ಪಿಯುಸಿ: ಏ.7ರಿಂದ ಮೌಲ್ಯಮಾಪನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಏ. 7ರಿಂದ ಆರಂಭವಾಗಲಿದೆ. ಒಟ್ಟು 37 ಕೇಂದ್ರಗಳಲ್ಲಿ ಉತ್ತರಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ಈ ತಿಂಗಳ ಅಂತ್ಯದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.ಬೆಂಗಳೂರಿನಲ್ಲಿ 17, ಮೈಸೂರಿನಲ್ಲಿ 6, ಬೆಳಗಾವಿಯಲ್ಲಿ ಐದು, ಮಂಗಳೂರಿನಲ್ಲಿ ನಾಲ್ಕು, ದಾವಣಗೆರೆಯಲ್ಲಿ ಮೂರು ಮತ್ತು ಶಿವಮೊಗ್ಗದಲ್ಲಿ ಎರಡು ಮೌಲ್ಯಮಾಪನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಒಟ್ಟು 15,732 ಮೌಲ್ಯಮಾಪಕರು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವರು. 2,497 ಉಪ ಮುಖ್ಯ ಮೌಲ್ಯಮಾಪಕರು ಮತ್ತು 13,235 ಸಹಾಯಕ ಮೌಲ್ಯಮಾಪಕರು ಮೌಲ್ಯಮಾಪನದಲ್ಲಿ ಭಾಗವಹಿಸುವರು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.ಗಣಿತ, ಹಿಂದಿ ಮತ್ತು ಸಂಸ್ಕೃತ ವಿಷಯಗಳಿಗೆ ಹೊರತುಪಡಿಸಿ ಉಳಿದ ವಿಷಯಗಳ ಉಪ ಮುಖ್ಯ ಮೌಲ್ಯಮಾಪಕರು ಶನಿವಾರ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಬೇಕು. ಸಹಾಯಕ ಮೌಲ್ಯ ಮಾಪಕರು ಏಪ್ರಿಲ್ 9ರಂದು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಬೇಕು.ಗಣಿತ, ಹಿಂದಿ ಮತ್ತು ಸಂಸ್ಕೃತ ವಿಷಯಗಳ ಉಪ ಮುಖ್ಯ ಮೌಲ್ಯಮಾಪಕರು ಏ. 9ರಂದು ಕರ್ತವ್ಯಕ್ಕೆ ಹಾಜರಾಗಬೇಕು. ಸಹಾಯಕ ಮೌಲ್ಯಮಾಪಕರು ಏ.11ರಂದು ಕರ್ತವ್ಯಕ್ಕೆ ಹಾಜರಾಗಬೇಕು. ಮೌಲ್ಯಮಾಪನ ಕಾರ್ಯಕ್ಕೆ ಆದೇಶ ಕಳುಹಿಸಿರುವ ಎಲ್ಲ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಇಲಾಖೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.