ಶುಕ್ರವಾರ, ಜೂನ್ 25, 2021
27 °C

ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಕ್ಕೆ ಸಚಿವರ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಕ್ಕೆ ಸಚಿವರ ಭೇಟಿ

ಶಿವಮೊಗ್ಗ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ  ಗುರುವಾರ ರಾಜ್ಯದಾದ್ಯಂತ ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಇಲ್ಲಿನ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿನೀಡಿ ಪರಿಶೀಲಿಸಿದರು.ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 31ರವರೆಗೆ ಪರೀಕ್ಷೆ ನಡೆಯಲಿದೆ. ರಾಜ್ಯದ 923 ಕೇಂದ್ರಗಳಲ್ಲಿ 5,096 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಗುರುವಾರ ಪರೀಕ್ಷೆ ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಸಾಗಿದೆ ಎಂದು ತಿಳಿಸಿದರು.ಸುಗಮ ಪರೀಕ್ಷೆಗೆ ಎಲ್ಲ ರೀತಿಯ ಮುಂಜಾಗ್ರತೆ ವಹಿಸಲಾಗಿದೆ. ಪ್ರಶ್ನೆಪತ್ರಿಕೆ ಕಳುಹಿಸುವುದರಿಂದ ಹಿಡಿದು ಉತ್ತರಪತ್ರಿಕೆಗಳನ್ನು ಕೇಂದ್ರಗಳಿಗೆ ತಲುಪಿಸುವುದರವರೆಗೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಹೇಳಿದರು.ಪರೀಕ್ಷಾ ಸಂದರ್ಭದಲ್ಲಿ ನಕಲು ಮಾಡುವುದನ್ನು ತಡೆಯಲು ಮೂರು ಹಂತಗಳಲ್ಲಿ ಜಾಗೃತ ದಳಗಳನ್ನು ನಿಯೋಜಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಬರೆಯಬೇಕು. ಪೋಷಕರು, ಈ ದಿನಗಳಲ್ಲಿ ಮಕ್ಕಳ ಮೇಲೆ ಮಾನಸಿಕವಾಗಿ ಭಾರ ಹಾಕಬಾರದು ಎಂದು ನುಡಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.