ಬೆಂಗಳೂರು: ಇದೇ 15ರಿಂದ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ 5,96,097 ವಿದ್ಯಾರ್ಥಿಗಳು ಹಾಜರಾಗಲಿದ್ದು, ಪರೀಕ್ಷೆಗೆ ಬೇಕಾದ ಸಿದ್ಧತೆಗಳನ್ನು ಮಾಡಲಾಗಿದೆ. ಒಟ್ಟು 923 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

80 ಪರೀಕ್ಷಾ ಕೇಂದ್ರಗಳನ್ನು ಅತಿ ಸೂಕ್ಷ್ಮ, 86 ಕೇಂದ್ರಗಳನ್ನು ಸೂಕ್ಷ್ಮ ಕೇಂದ್ರಗಳು ಎಂದು ಗುರುತಿಸಲಾಗಿದೆ. ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಅಕ್ರಮ ತಡೆಯುವ ದೃಷ್ಟಿಯಿಂದ ವಿಶೇಷ ಜಾಗೃತ ದಳ ರಚಿಸಲಾಗಿದೆ. ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಂದರಂತೆ ಜಾಗೃತ ದಳದ ಸದಸ್ಯರನ್ನು ಪರೀಕ್ಷಾ ಉಸ್ತುವಾರಿಗಾಗಿ ನೇಮಿಸಲಾಗಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಮೂಲಕ ಖಾಸಗಿಯಾಗಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ನೋಂದಾಯಿಸಿಕೊಂಡಿರುವ ಕಾಲೇಜಿನ ಪಕ್ಕದ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

4,28,378 ಹೊಸ ಅಭ್ಯರ್ಥಿಗಳು, 1,30,815 ಪುನರಾವರ್ತಿತ ಹಾಗೂ 36,904 ಬಾಹ್ಯ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಕಲಾ ವಿಭಾಗದ 2,65,140, ವಾಣಿಜ್ಯ ವಿಭಾಗದ 1,72,048 ಹಾಗೂ ವಿಜ್ಞಾನ ವಿಭಾಗದ 1,58,909 ವಿದ್ಯಾರ್ಥಿಗಳಿದ್ದಾರೆ.

2,99,910 ವಿದ್ಯಾರ್ಥಿಗಳು ಕನ್ನಡ ಹಾಗೂ 2,96,187 ವಿದ್ಯಾರ್ಥಿಗಳು ಆಂಗ್ಲಮಾಧ್ಯಮದಲ್ಲಿ ಪರೀಕ್ಷೆ ಬರೆಯಲಿದ್ದಾರೆ. 3,20,445 ಬಾಲಕರು, 2,75,652 ಬಾಲಕಿಯರಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು 135 ಪರೀಕ್ಷಾ ಕೇಂದ್ರಗಳಿದ್ದು, 97218 ವಿದ್ಯಾರ್ಥಿಗಳಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.