ಮಂಗಳವಾರ, ಜೂನ್ 15, 2021
23 °C

ದ್ವಿತೀಯ ಪಿಯುಸಿ: ಭೌತವಿಜ್ಞಾನ ಪರೀಕ್ಷೆ ಮುಂದಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಶ್ನೆಪತ್ರಿಕೆ ಬಹಿರಂಗವಾದ ಹಿನ್ನೆಲೆಯಲ್ಲಿ ಗುರುವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಭೌತ ವಿಜ್ಞಾನ ವಿಷಯದ ಪರೀಕ್ಷೆಯನ್ನು ಮುಂದೂಡಲಾಗಿದೆ.ಬುಧವಾರ ತಡರಾತ್ರಿ ಪ್ರಶ್ನೆಪತ್ರಿಕೆ ಬಹಿರಂಗವಾಗಿರುವುದು ಖಚಿತವಾಗುತ್ತಿದ್ದಂತೆಯೇ ತಕ್ಷಣ ಕಾರ್ಯಪ್ರವೃತ್ತವಾದ ಪದವಿ ಪೂರ್ವ ಶಿಕ್ಷಣ ಇಲಾಖೆಯು ಪರೀಕ್ಷೆ ಮುಂದೂಡುವ ತೀರ್ಮಾನ ತೆಗೆದುಕೊಂಡಿತು.

 

ಮುಂದೂಡಿರುವ ಭೌತ ವಿಜ್ಞಾನ ವಿಷಯದ ಪರೀಕ್ಷೆಯ ಹೊಸ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಗುರುವಾರ ನಡೆಯಬೇಕಿದ್ದ ಮನಃಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ವಿಷಯಗಳ ಪರೀಕ್ಷೆ ನಿಗದಿಯಂತೆ ನಡೆಯಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.