ಹುಬ್ಬಳ್ಳಿ: ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ದ್ವಿತೀಯ ಪಿಯು ಪರೀಕ್ಷೆಗಳು ಆರಂಭಗೊಂಡವು. ಮೊದಲ ದಿನದಂದು ರಾಜ್ಯಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರೀಕ್ಷೆಗಳು ನಡೆದವು.

ಬೆಳಿಗ್ಗೆ 9ಕ್ಕೆ ಪರೀಕ್ಷೆ ನಿಗದಿಯಾಗಿದ್ದು, 8ರ ಸುಮಾರಿಗೆಲ್ಲ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳ ಮುಂದೆ ಜಮಾಯಿಸಿದ್ದರು. ಒಂದಿಷ್ಟು ಆತಂಕ, ಗೊಂದಲ ಮನದಲ್ಲಿ ಹೊತ್ತು ಕಡೆಯ ಕ್ಷಣದ ಸಿದ್ಧತೆಯಲ್ಲಿ ತೊಡಗಿದ್ದರು. ಅವರೊಟ್ಟಿಗೆ ಪೋಷಕರೂ ಕೇಂದ್ರಗಳಿಗೆ ಆಗಮಿಸಿ ಮಕ್ಕಳಿಗೆ ಧೈರ್ಯ ತುಂಬಿದರು. ಅಂತೆಯೇ ಪರೀಕ್ಷಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹುಡುಕುತ್ತಾ ಅತ್ತಿಂದಿತ್ತ ಅಲೆಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಹುಬ್ಬಳ್ಳಿಯ ಪಿ.ಸಿ. ಜಾಬಿನ್ ಕಾಲೇಜು, ಕಾಡಸಿದ್ಧೇಶ್ವರ ಕಾಲೇಜು. ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯ, ನೆಹರೂ ಕಾಲೇಜು, ಎಸ್ಜೆಎಂವಿ ಮಹಿಳಾ ಕಾಲೇಜು, ಚೇತನಾ ಕಾಲೇಜು, ಫಾತಿಮಾ ಕಾಲೇಜು ಸೇರಿದಂತೆ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟಾರೆ ಪ್ರಕ್ರಿಯೆಯು ಸುಸೂತ್ರವಾಗಿ ನಡೆಯಿತು.

ಧಾರವಾಡ: ಜಿಲ್ಲೆಯ ವಿವಿಧೆಡೆ ಇರುವ 35 ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಸಾವಿರಾರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಮಾ 27ರವರೆಗೆ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ವಿವಿಧ ವಿಷಯಗಳ ಪರೀಕ್ಷೆಗಳು ನಡೆಯಲಿವೆ.

ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಿಗೆ ಸಿ.ಸಿ. ಕ್ಯಾಮೆರಾ ಅಳವಡಿಸಲಾಗಿದ್ದು, ಅಕ್ರಮಗಳನ್ನು ತಡೆಯುವ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಸಿಬ್ಬಂದಿಗೆ ಇದೇ ಮೊದಲ ಬಾರಿಗೆ ಗುರುತಿನ ಚೀಟಿಗಳನ್ನು ನೀಡಲಾಗಿತ್ತು. ನಗರದ ಅಂಜುಮನ್ ಕಾಲೇಜಿಗೆ ಪರೀಕ್ಷೆ ಆರಂಭವಾಗುವುದಕ್ಕೂ ಮುನ್ನ ಭೇಟಿ ನೀಡಿದ್ದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣೇಶ ಪೂಜಾರ, ಗುರುತಿನ ಚೀಟಿ ಇಲ್ಲದ ವ್ಯಕ್ತಿಗಳನ್ನು ಸಿಬ್ಬಂದಿಯ ಸಹಾಯದಿಂದ ಹೊರಗೆ ಕಳಿಸಿದರು. ಮೊದಲ ದಿನ ಜಿಲ್ಲೆಯಲ್ಲಿ ಯಾವುದೇ ಡಿಬಾರ್ ಆಗಿಲ್ಲ ಎಂದು ಪೂಜಾರ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.