`ದ್ವಿಪಕ್ಷೀಯ ಸಂಬಂಧಕ್ಕೆ ಧಕ್ಕೆ ಇಲ್ಲ'
ಮಾಲೆ (ಪಿಟಿಐ): ಇಲ್ಲಿನ ವಿಮಾನ ನಿಲ್ದಾಣ ಅಭಿವೃದ್ಧಿಗೆ ಭಾರತದ ಜಿಎಂಆರ್ ಸಮೂಹಕ್ಕೆ ನೀಡಿದ್ದ 50 ಕೋಟಿ ಡಾಲರ್ ಗುತ್ತಿಗೆಯನ್ನು ರದ್ದು ಮಾಡಿರುವುದು ಉಭಯ ದೇಶಗಳ ಸಂಬಂಧದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಮಾಲ್ಡೀವ್ಸ್ ಅಧ್ಯಕ್ಷ ಮಹಮ್ಮದ್ ವಹೀದ್ ಬುಧವಾರ ಭರವಸೆ ನೀಡಿದ್ದಾರೆ.
`ಮಹಮ್ಮದ್ ನಶೀದ್ ಸರ್ಕಾರವು ಜಿಎಂಆರ್ ಸಮೂಹದ ಜತೆ ಮಾಡಿಕೊಂಡ ಒಪ್ಪಂದವು ಊರ್ಜಿತವಾಗಿರಲಿಲ್ಲ' ಎಂದೂ ಅವರು ಹೇಳಿದ್ದಾರೆ.
ಸುಮಾರು ರೂ 2,650 ಕೋಟಿ ವೆಚ್ಚದ ಮಾಲೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅಭಿವೃದ್ಧಿಗೆ ಸಂಬಂಧಿಸಿದ ಜಿಎಂಆರ್ ಯೋಜನೆಯನ್ನು ಕೈಬಿಟ್ಟಿರುವುದರಿಂದ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಕ್ಕೆ ಧಕ್ಕೆ ಉಂಟಾಗುವುದಿಲ್ಲ ಎಂದು ಮಾಲ್ಡೀವ್ಸ್ ಅಧ್ಯಕ್ಷ ಮಹಮ್ಮದ್ ವಹೀದ್ ಅವರು ಗುರುವಾರ ಭರವಸೆ ನೀಡಿದ್ದಾರೆ.
ಭಾರತೀಯರ ಹಿತಾಸಕ್ತಿ ಕಾಪಾಡುವಲ್ಲಿ ಅಲ್ಲಿನ ಸರ್ಕಾರ ಬದ್ಧವಾಗಿರಬೇಕು ಎಂದು ಭಾರತವು ತೀಕ್ಷ್ಮವಾಗಿ ಪ್ರತಿಕ್ರಿಯಿಸಿತ್ತು. ಈ ಹಿನ್ನೆಲೆಯಲ್ಲಿ ವಹೀದ್ ಅವರು ಈ ಹೇಳಿಕೆ ನೀಡಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.