ಧನ ಸಹಾಯಕ್ಕೆ ಅರ್ಜಿ ಆಹ್ವಾನ

7

ಧನ ಸಹಾಯಕ್ಕೆ ಅರ್ಜಿ ಆಹ್ವಾನ

Published:
Updated:

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2012-13 ನೇ ಸಾಲಿನಲ್ಲಿ ವಿಶೇಷ ಘಟಕ ಯೊಜನೆಯಡಿ ತಾಲ್ಲೂಕಿಗೆ ಎರಡು ನೋಂದಾಯಿತ ಸಂಸ್ಥೆಗಳಿಗೆ ವಿಚಾರ, ನಾಟಕೋತ್ಸವ, ಕವಿಗೋಷ್ಠಿ ನಡೆಸಲು 10 ಸಾವಿರ ರೂಪಾಯಿ ಧನಸಹಾಯ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ.ಅರ್ಜಿ ಸಲ್ಲಿಸುವವರು ಸಂಸ್ಥೆಯ ಶಿರೋನಾಮೆ ಇರುವ ಹಾಳೆಯಲ್ಲಿ ಸಂಸ್ಥೆಯ ವಿವರ, ಸಾಧನೆಯನ್ನು ಬರೆದು ಜನವರಿ 10ರ ಒಳಗೆ ಅರ್ಜಿ ಸಲ್ಲಿಸಲು ಪ್ರಕಟಣೆ ತಿಳಿಸಿದೆ.ವಿಳಾಸ: ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಕನ್ನಡ ಭವನ, ಜೆ.ಸಿ.ರಸ್ತೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 2222 1271ಆರೋಗ್ಯ ತಪಾಸಣೆ ಶಿಬಿರ

ಮಂಡೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ  ಇತ್ತೀಚೆಗೆ ಆರೋಗ್ಯ ಶಿಬಿರವನ್ನು ನಡೆಸಲಾಯಿತು. ಹೃದಯ ಸಂಬಂಧಿ ಕಾಯಿಲೆ, ಚರ್ಮರೋಗ, ಮಧುಮೇಹ, ರಕ್ತದೊತ್ತಡ ಮತ್ತಿತರರ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಯಿತು. ರೋಗಿಗಳಿಗೆ ಪಾಲಿಕೆ ವತಿಯಿಂದ ಉಚಿತ ಔಷಧ ವಿತರಿಸಲಾಯಿತು. ಶಿಬಿರದಲ್ಲಿ ಉಪ ಆರೋಗ್ಯಾಧಿಕಾರಿ ಡಾ.ಪಿ.ಕಲ್ಪನಾ ಮತ್ತಿತರರು ಉಪಸ್ಥಿತರಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry