ಮಂಗಳವಾರ, ಮೇ 18, 2021
22 °C

ಧರಮ್ ವೀರ್ ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಜಾಲಹಳ್ಳಿಯಲ್ಲಿರುವ ವಾಯುಪಡೆಯ ಕಚೇರಿಯಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಏರ್ ಕೊಮೋಡರ್ ಧರಮ್ ವೀರ್ ಅವರು ಏರ್ ಆಫೀಸರ್ ಕಮಾಂಡಿಂಗ್ ಆಗಿ ಅಧಿಕಾರ ವಹಿಸಿಕೊಂಡರು.

ಧರಮ್ ವೀರ್ ಅವರು 1978ರ ಜೂನ್ 25ರಂದು ಭಾರತೀಯ ವಾಯುಪಡೆಗೆ ಸೇರ್ಪಡೆಯಾಗಿದ್ದರು.ವಾಯುಪಡೆಯಲ್ಲಿ 34 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅವರು ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದರು. ಅವರು ನವದೆಹಲಿ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಪದವೀಧರ, ಚೆನ್ನೈ ಐಐಟಿಯ ಸ್ನಾತಕೋತ್ತರ ಪದವೀಧರ ಹಾಗೂ ವೆಲ್ಲಿಂಗ್‌ಟನ್‌ನ ರಕ್ಷಣಾ ಸೇವೆ ಸಿಬ್ಬಂದಿ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ. ಹಲವು ಬಾರಿ ವಿದೇಶಗಳಲ್ಲಿ ತರಬೇತಿ ಪಡೆದಿದ್ದರು.  

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.