ಗುರುವಾರ , ಮೇ 19, 2022
25 °C

ಧರ್ಮರಾಯಸ್ವಾಮಿ ದ್ರೌಪತಮ್ಮ ಕಲ್ಯಾಣೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ : ಇಲ್ಲಿನ ಪ್ರಸಿದ್ಧ ಧರ್ಮರಾಯಸ್ವಾಮಿ ದ್ರೌಪತಮ್ಮ ದೇವಾಲಯದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಧರ್ಮರಾಯಸ್ವಾಮಿ ದ್ರೌಪತಮ್ಮ ನವರ ಕಲ್ಯಾಣೋತ್ಸವವು ಗುರುವಾರ ಅದ್ದೂರಿಯಾಗಿ ಜರುಗಿತು.ಧಾರ್ಮಿಕ ವಿಧಿ ವಿಧಾನಗಳಲ್ಲಿ ದೇವಾಲಯ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಭಕ್ತರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ದೇವರಿಗೆ ಕಲ್ಯಾಣೋತ್ಸವದ ಉಡುಗೊರೆ ಸಲ್ಲಿಸಿದರು. ಪಂಡರಾಪುರ ಭಜನೆ, ಮತ್ತಿತರ ಕಾರ್ಯಕ್ರಮಗಳು ನಡೆದವು.ಹೂವಿನ ಕರಗ ಮಹೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಗಳು ಆರಂಭವಾಗಿದ್ದು, ಪುಣ್ಯಾಹ, ಧ್ವಜಾರೋಹಣ, ವಿಶೇಷ ಅಲಂಕಾರ, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳು, ಹಸಿಕರಗ ಮಹೋತ್ಸವ ನಡೆಯಿತು.ಜಾತ್ರೆ: ಚನ್ನಕೇಶವಸ್ವಾಮಿ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳು ಆರಂಭವಾಗಿದ್ದು ಗುರುವಾರ ಮೃತ್ತಿಕಾ ಸಂಗ್ರಹಣ, ಅಂಕುರಾರ್ಪಣ, ಧ್ವಜಾರೋಹಣ, ಭೇರಿಪೂಜೆ, ಅಭಿಷೇಕ, ಹನುಮಂತ ವಾಹನೋತ್ಸವ, ಸಿಂಹವಾಹನೋತ್ಸವ, ಶೇಷ ವಾಹನೋತ್ಸವ, ಅಭಿಷೇಕ, ಪೂಲಂಗಿ ಸೇವೆ, ಮಂಟಪ ಪಡಿಸೇವೆ, ಹೂವಿನ ಅಲಂಕಾರ, ಕಲ್ಯಾಣೋತ್ಸವ, ಗರುಡ ವಾಹನೋತ್ಸವ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.