ಬೆಂಗಳೂರು: ದೃಷ್ಟಿ ದೋಷವುಳ್ಳ ಅಂಗವಿಕಲರ ನಾನಾ ಬೇಡಿಕೆಗಳ ಬಗ್ಗೆ ಸರಕಾರದ ಗಮನ ಸೆಳೆಯಲು ಸಮರ್ಪಣ ಚಾರಿಟಬಲ್ ಟ್ರಸ್ಟ್ ಫಾರ್ ದಿ ಡಿಸೇಬಲ್ಡ್ ಸಂಸ್ಥೆಯು ಇದೇ 18 ರಿಂದ 25ರವರೆಗೆ ಸಿದ್ಧಗಂಗಾ ಕ್ಷೇತ್ರದಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಹಮ್ಮಿಕೊಂಡಿದೆ.ಅಂದು ಸಂಜೆ 6.30ಕ್ಕೆ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮೀಜಿಯವರ ಆಶೀರ್ವಾದ ಪಡೆದು ಸುಮಾರು 50ಕ್ಕೂ ಹೆಚ್ಚು ದೃಷ್ಟಿದೋಷ ಅಂಗವಿಕಲರು ಪಾದಯಾತ್ರೆ ಕೈಗೊಳ್ಳಲಿದ್ದಾರೆ ಎಂದು ಟ್ರಸ್ಟ್ನ ವ್ಯವಸ್ಥಾಪಕ ಎಂ.ಎಲ್. ನರಸಿಂಹಮೂರ್ತಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರೌಢಶಾಲೆಯಿಂದ ಸ್ನಾತಕೋತ್ತರವರೆಗೆ ಹಾಗೂ ವೃತ್ತಿಪರ ಶಿಕ್ಷಣದಲ್ಲಿ ಮೀಸಲು ಕಡ್ಡಾಯಗೊಳಿಸಿ, ಉಚಿತ ಶಿಕ್ಷಣ ನೀಡಬೇಕು. ಹೈಕೊರ್ಟ್ ಆದೇಶದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಪ್ರಾಥಮಿಕ ಶಿಕ್ಷಕರ ನೇಮಕ ಪ್ರಕ್ರಿಯೆಯಲ್ಲಿ ಮೀಸಲು ಕಲ್ಪಿಸಬೇಕು.

ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ಬಡ್ಡಿ ರಹಿತ ಸರಳ ಸಾಲ ಸೌಲಭ್ಯವನ್ನು ಒದಗಿಸಿಕೊಡುವುದು ಹಾಗೂ ಅವರು ಉತ್ಪಾದಿಸಿದ ವಸ್ತುಗಳಿಗೆ ನ್ಯಾಯಬೆಲೆಯೊಂದಿಗೆ ಮಾರುಕಟ್ಟೆ ಒದಗಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಸರಕಾರಕ್ಕೆ ಶಿಫಾರಸ್ಸು ಮಾಡುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.