ಗುರುವಾರ , ಮೇ 19, 2022
25 °C

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಶ್ಲಾಘನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಕಲೇಶಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಪ್ರದೇಶಗಳಲ್ಲಿ ನಿರುದ್ಯೋಗಿ ಗಳನ್ನು ಉದ್ಯೋಗಿ ಗಳನ್ನಾಗಿ ಮಾಡುವ ಮಹತ್ತರ ಕಾರ್ಯ ಮಾಡುತ್ತಿದೆ ಎಂದು ಶಾಸಕ ಎಚ್.ಕೆ. ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.ಪಟ್ಟಣದಲ್ಲಿ ಭಾನುವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾ ಕಚೇರಿ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ಶೇ 30ಕುಟುಂಬಗಳು ಮಾಹಿತಿ ಹಾಗೂ ಜ್ಞಾನದ ಕೊರತೆಯಿಂದ ಸರ್ಕಾರದ ಯೋಜನೆಗಳ ಸೌಲಭ್ಯ ಪಡೆದುಕೊಳ್ಳುವಲ್ಲಿ ವಿಫಲರಾ ಗಿದ್ದಾರೆ. ಅಂತಹ ಕುಟುಂಬಗಳನ್ನು ಗುರುತಿಸಿ ಅವರಿಗೆ ಸರ್ಕಾರದ ಸೌಲಭ್ಯಗಳು ತಲುಪುವುದರ ಜತೆಗೆ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಬಲ ನೀಡುವ ಕೆಲಸ ವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಹಳ ಯಶಸ್ವಿಯಾಗಿ ಮಾಡುತ್ತಿದೆ ಎಂದರು.ಗ್ರಾಮಾಭಿವೃದ್ಧಿ ಯೋಜನೆಯ ಮೈಸೂರು ಪ್ರಾದೇಶಿಕ ನಿರ್ದೇಶಕ ಎ.ಶ್ರೀಹರಿ ಮಾತನಾಡಿ, ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರು, ಅನಕ್ಷರಸ್ಥರು, ಕುಶಲಕರ್ಮಿಗಳು, ರೈತರ ಸಮಸ್ಯೆ ಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಯನ್ನು ಡಾ. ವಿರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ.ಹೆಗ್ಗಡೆಯವರು ಅನುಷ್ಠಾನ ಗೊಳಿಸಿದ್ದಾರೆ ಎಂದರು.ಡಿವೈಎಸ್‌ಪಿ ವೆಂಕಟರಮಣಪ್ಪ, ಯೋಜನೆಯ ಜಿಲ್ಲಾ ನಿರ್ದೇಶಕಿ ಜಯಶೀಲ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜಮ್ಮ ತಿಪ್ಪೇಸ್ವಾಮಿ ಮಾತನಾಡಿದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಸುಮಂಗಲಿ, ಪುರಸಭಾ ಸದಸ್ಯರಾದ ಉಮೇಶ್ ಆಚಾರ್, ಸತ್ಯವತಿ, ಮಠಸಾಗರ ಪ್ರೇಮ್‌ಕುಮಾರ್ ಇದ್ದರು.ಪ್ರಕೃತಿ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

ಜಾವಗಲ್ ವರದಿ:  ಹಳ್ಳಿಗಳಲ್ಲಿನ ಸಾಕಷ್ಟು ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳಿಗೆ  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಥ್ ನೀಡಿದೆ ಎಂದು ಶಾಸಕ ವೈ.ಎನ್. ರುದ್ರೇಶಗೌಡ ತಿಳಿಸಿದರು.  ಪಟ್ಟಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಪ್ರಕೃತಿ ಜ್ಞಾನ ವಿಕಾಸ ಕೇಂದ್ರವನ್ನು ಈಚೆಗೆ ಉದ್ಘಾಟಿಸಿ ಅವರು ಮಾತನಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ದೇಗುಲಗಳ ಜೀರ್ಣೋದ್ದಾರ, ಕೃಷಿ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರಿಯಾಗಿದೆ ಎಂದರು.ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮಣ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಲಕ್ಷ್ಮೀ ರವಿಶಂಕರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ ಮಂಜುನಾಥ್, ಕವಿತಾ, ಮಾದರಿ ಶಾಲೆ ಕಾರ್ಯದರ್ಶಿ ಡಾ. ವಿನಾಯಕ್, ಒಕ್ಕೂಟಗಳ ಅಧ್ಯಕ್ಷರಾದ ರೇಣುಕಾ, ಕವಿತಾ, ಮೇಲ್ವಿಚಾರಕ ನವೀನ್ ಯೋಜನಾಧಿಕಾರಿ ಕೇಶವ ನಾಯಕ್, ಸಮನ್ವಯಾಧಿಕಾರಿ ಕವಿತಾ, ತಾರಾ ಮಾತನಾಡಿದರು.  ಸಂಸ್ಥೆಯ ಅಧ್ಯಕ್ಷ ಸಿದ್ದಲಿಂಗೇಗೌಡ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ನಳಿನಾಂಬಿಕಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.