ಸೋಮವಾರ, ಮಾರ್ಚ್ 1, 2021
23 °C

ಧರ್ಮಸ್ಥಳ: 142 ಜೋಡಿ ವಿವಾಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧರ್ಮಸ್ಥಳ: 142 ಜೋಡಿ ವಿವಾಹ

ಉಜಿರೆ: ಧರ್ಮಸ್ಥಳದಲ್ಲಿ ಶುಕ್ರವಾರ ಸಂಜೆ ಗೋಧೂಳಿ ಲಗ್ನದಲ್ಲಿ ನಡೆದ 43ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 142 ಜೋಡಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದರು. ಇವರಲ್ಲಿ 11 ಜೋಡಿ ಅಂತರ್ಜಾತಿ ವಿವಾಹ.



ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ,  ಮದುವೆ ಮೋಜಿಗಾಗಿ ಅಲ್ಲ. ಸಾರ್ಥಕ ಬದುಕಿಗಾಗಿ ಎಂದು ಕಿವಿಮಾತು ಹೇಳಿದರು. 



ನೂತನ ದಂಪತಿಗಳಿಗೆ ಸಚಿವ ಕೆ. ಅಭಯಚಂದ್ರ ಜೈನ್, ಮಾಜಿ ಸಭಾಪತಿ ಬಿ.ಎಲ್. ಶಂಕರ್, ಮಾಜಿ ಸಚಿವ ಗೋವಿಂದ ಕಾರಜೋಳ ಮತ್ತು ಶಾಸಕ ಕೆ. ವಸಂತ ಬಂಗೇರ ಶುಭ ಹಾರೈಸಿದರು.  ವರನಿಗೆ ಧೋತಿ ಮತ್ತು ಶಾಲು ಹಾಗೂ ವಧುವಿಗೆ ಸೀರೆ, ರವಿಕೆ ಕಣ ಮತ್ತು ಮಂಗಳ ಸೂತ್ರ ನೀಡಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.