ಗುರುವಾರ , ಏಪ್ರಿಲ್ 15, 2021
23 °C

ಧರ್ಮೋತ್ತೇಜಕ ಸಮಾರಂಭ 21ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಸವಕಲ್ಯಾಣ: ಇಲ್ಲಿನ ರಂಭಾಪುರಿ ಪೀಠದ ಜಗದ್ಗುರು ವೀರ ಸೋಮೇಶ್ವರ ಶಿವಾಚಾರ್ಯರ ಸಾನಿಧ್ಯದಲ್ಲಿ ನವೆಂಬರ್ 21ರಂದು ವೀರಶೈವ ಸದ್ಬೋಧನ ಸಂಸ್ಥೆಯ ತಾಲ್ಲೂಕು ಘಟಕದ ಉದ್ಘಾಟನೆ ಮತ್ತು ಧರ್ಮೋತ್ತೇಜಕ ಸಮಾರಂಭ ನಡೆಯಲಿದೆ.ಅಂದು ಮಧ್ಯಾಹ್ನ 4.30 ಗಂಟೆಗೆ ಇಲ್ಲಿನ ಸದ್ಗುರು ಸದಾನಂದ ಸ್ವಾಮಿ ಮಠದ ಆವರಣದಲ್ಲಿ ನಡೆಯುವ ಸಮಾರಂಭವನ್ನು ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಅನಿಲಕುಮಾರ ರಗಟೆ ಉದ್ಘಾಟಿಸುವರು.ತ್ರಿಪುರಾಂತ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು, ತಡೋಳಾ ರಾಜೇಶ್ವರ ಶಿವಾಚಾರ್ಯರು, ಹುಡಗಿ ವಿರುಪಾಕ್ಷ ಶಿವಾಚಾರ್ಯರು, ಹಿರೇನಾಗಾಂವ ಜಯಶಾಂತಲಿಂಗ ಸ್ವಾಮೀಜಿ, ಕಿಟ್ಟಾ ಸಿದ್ಧೇಶ್ವರ ಸ್ವಾಮೀಜಿ, ಸಲಗರ ಸಾಂಬಶಿವಯೋಗಿ ಶಿವಾಚಾರ್ಯರು, ಗಡಿಗೌಡಗಾಂವ ಶಾಂತವೀರ ಶಿವಾಚಾರ್ಯರು, ಶಿವಣಿ ಹಾವಗಿಲಿಂಗೇಶ್ವರ ಶಿವಾಚಾರ್ಯರು, ಸದ್ಲಾಪುರ ಸಿದ್ಧಲಿಂಗ ಶಿವಾಚಾರ್ಯರು, ತಾಂಬೋಳ ವಿಜಯಕುಮಾರ ಸ್ವಾಮೀಜಿ, ಹುಮನಾಬಾದ ಗಂಗಾಧರ ಸ್ವಾಮೀಜಿ, ಡೊಂಗರಗಾಂವ ಉದಯರಾಜೇಂದ್ರ ಸ್ವಾಮೀಜಿ ಪಾಲ್ಗೊಳ್ಳುವರು.ಶಾಸಕ ಬಸವರಾಜ ಪಾಟೀಲ ಅಟ್ಟೂರ್ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಸದಸ್ಯ ಬಸವರಾಜ ಪಾಟೀಲ ಹುಮನಾಬಾದ್, ಶಾಸಕರಾದ ಈಶ್ವರ ಖಂಡ್ರೆ, ರಾಜಶೇಖರ ಪಾಟೀಲ ಹುಮನಾಬಾದ್, ವೀರಶೈವ ಸದ್ಬೋಧನ ಸಂಸ್ಥೆ ಜಿಲ್ಲಾಧ್ಯಕ್ಷ ಡಾ. ನಾಗೇಂದ್ರ ಮಸೂತಿ, ಮಾಜಿ ಶಾಸಕರಾದ ಎಂ.ಜಿ.ಮುಳೆ, ಮಲ್ಲಿಕಾರ್ಜುನ ಖೂಬಾ, ಬೀದರ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಂಜಯ ಖೇಣಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗುಂಡುರೆಡ್ಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.ಕಾಂಗ್ರೆಸ್ ಮುಖಂಡರಾದ ಆನಂದ ದೇವಪ್ಪ, ಶಿವರಾಜ ನರಶೆಟ್ಟಿ, ಶಿವಶರಣ ಬಿರಾದಾರ, ಬಸವರಾಜ ಜಾಬಶೆಟ್ಟಿ, ವಕೀಲ ಎಂ.ಜಿ.ಮಹಾಜನ, ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಶಶಿಕಾಂತ ದುರ್ಗೆ, ಬಾಬುರಾವ ಬಿರಾದಾರ ಭಾಲ್ಕಿ, ಪ್ರಾಚಾರ್ಯ ಸೂರ್ಯಕಾಂತ ಶೀಲವಂತ, ನಿವೃತ್ತ ಕೃಷಿ ಅಧಿಕಾರಿ ಬಸವಂತಪ್ಪ ಲವಾರೆ ಅತಿಥಿಗಳಾಗಿ ಪಾಲ್ಗೊಳ್ಳುವರು.ಪಂಡಿತ ಪುಟ್ಟರಾಜ ಗವಾಯಿ ಸಂಗೀತ ಬಳಗದಿಂದ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ ಎಂದು ವೀರಶೈವ ಸದ್ಬೋಧನ ಸಂಸ್ಥೆ ಅಧ್ಯಕ್ಷ ವೀರಣ್ಣ ಶೀಲವಂತ ಮತ್ತು ಕಾರ್ಯಾಧ್ಯಕ್ಷ ಸುನಿಲ ಎಂ.ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.