ಬುಧವಾರ, ಜೂನ್ 23, 2021
24 °C

ಧಾರ್ಮಿಕ ಆಚರಣೆಯಿಂದ ಶಾಂತಿ ನೆಮ್ಮದಿ: ಲಿಂಬಾವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ಇಂದಿನ ಒತ್ತಡದ ಜೀವನದಲ್ಲಿ ಜನರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರ ಮೂಲಕ ಶಾಂತಿ- ನೆಮ್ಮದಿ ಕಂಡುಕೊಳ್ಳುವಂತೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಕರೆ ನೀಡಿದರು.ತಾಲ್ಲೂಕಿನ ಪಿಲ್ಲಗುಂಪೆ-ಚೊಕ್ಕಹಳ್ಳಿಯಲ್ಲಿರುವ ವೆಂಕಟಾದ್ರಿ ಮಠದ ಸದ್ಗುರು ವೆಂಕಟಾದ್ರಿ ಸ್ವಾಮಿಗಳ 77ನೇ ಆರಾಧನಾ ಮಹೋತ್ಸವ ಸಮಾರಂಭದಲ್ಲಿ ಭಾನುವಾರ ಪಾಲ್ಗೊಂಡು ಅವರು ಮಾತನಾಡಿದರು.

ಮಠದ ಮುಖ್ಯಸ್ಥ ಕೆ.ವೆಂಕಟಾಚಾರ್‌ಸ್ವಾಮಿ, ಭಕ್ತಾದಿಗಳ ಅನುಕೂಲಕ್ಕಾಗಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಸಿ.ಮಂಜುನಾಥ್, ಎಪಿಎಂಸಿ ಅಧ್ಯಕ್ಷ ಸಿ.ಮುನಿಯಪ್ಪ, ತಾ.ಪಂ.ಸದಸ್ಯ ಕೆ.ರಾಮಾಂಜಿನಪ್ಪ, ಕನ್ನಡ ಕಾರ್ಮಿಕರ ಹೋರಾಟ ವೇದಿಕೆಯ ಗೌರವ ಅಧ್ಯಕ್ಷ ರಾಜಗೋಪಾಲ್, ಅಧ್ಯಕ್ಷ ಡಿ.ಎಚ್.ರವೀಂದ್ರನಾಥ್ ತರರು ಉಪಸ್ಥಿತರಿದ್ದರು.ಯುವಜನ ಸಮಾವೇಶ:  ಯುವ ಜನರು ದೊಡ್ಡ ಪ್ರಮಾಣದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿರುವ ತಾಲ್ಲೂಕು ಸಿಐಟಿಯು ಅಧ್ಯಕ್ಷ ಹರೀಂದ್ರ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿವೆ ಎಂದು ಟೀಕಿಸಿದರು. ಡಿವೈಎಫ್‌ಐನ ಆಶ್ರಯದಲ್ಲಿ ಭಾನುವಾರ ನಡೆದ ತಾಲ್ಲೂಕು ಯುವಜನ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಅತಿಥಿಯಾಗಿದ್ದ ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಲಿಂಗರಾಜು, ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1.80 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ಮಾ.19 ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು. ಡಿವೈಎಫ್‌ಐನ ಅಧ್ಯಕ್ಷ ಎನ್.ಶ್ರೀನಿವಾಸಚಾರ್ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಮೋಹನ್‌ಬಾಬು, ನರಸಿಂಹಮೂರ್ತಿ, ಎಂ.ಮುನಿರಾಜು, ಗಣೇಶ್ ಮಾತನಾಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.