ಸೋಮವಾರ, ಮಾರ್ಚ್ 27, 2023
22 °C

ಧ್ವಜಾರೋಹಣ ನೆರವೇರಿಸಿದ ಪ್ರಣವ್‌ ಮುಖರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧ್ವಜಾರೋಹಣ ನೆರವೇರಿಸಿದ ಪ್ರಣವ್‌ ಮುಖರ್ಜಿ

ನವದೆಹಲಿ: ರಾಜಧಾನಿ ದೆಹಲಿಯ ರಾಜ್‌ಪಥದಲ್ಲಿ ರಾಷ್ಟ್ರ‍ಪತಿ ಪ್ರಣವ್ ಮುಖರ್ಜಿ ಅವರು 67ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ, ಭಾರತೀಯ ಸೇನಾ ಶಕ್ತಿ ಪ್ರದರ್ಶನ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು.



ಫ್ಲಟೂನ್ ಕಮಾಂಡರ್ ರಾಕೇಶ್‌ ಯಾಧವ್ ಅವರ ನೇತೃತ್ವದಲ್ಲಿ ರಾಷ್ಟ್ರಪತಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಾದ್ಯವೃಂದ ಸುಶ್ರಾವ್ಯವಾಗಿ ನುಡಿಸಿದ ರಾಷ್ಟ್ರಗೀತೆಯೊಂದಿಗೆ ಗೌರವ ಸಲ್ಲಿಸಲಾಯಿತು.



ಅಶ್ವ ದಳ ಮುಂದಾಳತ್ವದಲ್ಲಿ ರಾಜ್‌ಪಥಕ್ಕೆ ಗಣರಾಜ್ಯೋತ್ಸವದ ಅತಿಥಿ ಫ್ರಾನ್ಸ್‌ ಅಧ್ಯಕ್ಷ ಫ್ರಾಂಸ್ವಾ ಒಲಾಂಡ್‌ ಅವರನ್ನು ಕರೆತರಲಾಯಿತು. ಪ್ರಧಾನಿ ಮೋದಿ ಅವರು ಒಲಾಂಡ್ ಅವರನ್ನು ಸ್ವಾಗತಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.