ಮುಳಬಾಗಲು: ತಾಲ್ಲೂಕಿನ ಗಡಿಯಂಚಿನ ನಂಗಲಿ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮೂಲಸೌಕರ್ಯ ಹಾಗೂ ವೈದ್ಯರ ಕೊರತೆಯಿಂದ ಬಳಲುತ್ತಿದ್ದು, ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ.

ಸುತ್ತಮುತ್ತಲ 37 ಗ್ರಾಮದ ರೋಗಿಗಳು ಈ ಆರೋಗ್ಯ ಕೇಂದ್ರಕ್ಕೆ ಬರುತ್ತಾರೆ. 25 ಸಾವಿರಕ್ಕೂ ಹೆಚ್ಚು ಜನರ ಆರೋಗ್ಯ ರಕ್ಷಣೆಗಾಗಿ 50 ವರ್ಷಗಳ ಹಿಂದೆ ಈ ಆರೋಗ್ಯ ಕೇಂದ್ರ ಸ್ಥಾಪಿಸಲಾಯಿತು. ಈ ಗ್ರಾಮ ವ್ಯಾಪ್ತಿಯಲ್ಲಿ ಬಹುತೇಕರು ಕೂಲಿ ಮಾಡಿ ಜೀವನ ನಡೆಸುತ್ತಿದ್ದಾರೆ. ಅವರು ಇದೇ ಆಸ್ಪತ್ರೆಯನ್ನು ನಂಬಿಕೊಂಡಿದ್ದಾರೆ. ಇಲ್ಲಿ ವೈದ್ಯರೊಬ್ಬರಿದ್ದು ಬೆಳಿಗ್ಗೆಯಿಂದ ಸಂಜೆವರೆಗೂ ರೋಗಿಗಳನ್ನು ತಪಾಸಣೆ ಮಾಡುತ್ತಾರೆ. ಆದರೆ ರಾತ್ರಿ ಸಮಯದಲ್ಲಿ ಇಲ್ಲಿ ವೈದ್ಯರ ಅವಶ್ಯಕತೆ ಇದೆ.

ಈ ಆಸ್ಪತ್ರೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿದ್ದು, ಆಗಾಗ ಸಂಭವಿಸುವ ಅಪಘಾತಗಳು ಆಸ್ಪತ್ರೆ ಅವಶ್ಯಕತೆ ಹೆಚ್ಚಿಸಿದೆ. ರಾತ್ರಿ ವೇಳೆ ಅಪಘಾತ ಸಂಭವಿಸಿದರೆ ಸಿಬ್ಬಂದಿ ಇಲ್ಲದೇ ಗಾಯಾಳುಗಳು ತೊಂದರೆ ಅನುಭವಿಸುವಂತಾಗಿದೆ.

ಈ ಆಸ್ಪತ್ರೆಗೆ ಮುಖ್ಯವಾಗಿ ಹೆರಿಗೆ ತಜ್ಞರು, ಸ್ತ್ರೀ ರೋಗ ತಜ್ಞರ ಅವಶ್ಯಕತೆಯಿದೆ. ಈ ಭಾಗದಲ್ಲಿ ತಿಂಗಳಿಗೆ ಸರಾಸರಿ ಮೂವತ್ತಕ್ಕೂ ಹೆಚ್ಚು ಮಕ್ಕಳು ಜನಿಸುತ್ತಿದ್ದಾರೆ. ತಿಂಗಳಿಗೆ ನೂರಕ್ಕೂ ಹೆಚ್ಚು ಗರ್ಭಿಣಿಯರು ತಪಾಸಣೆಗೆ ಹಾಗೂ ಚಿಕಿತ್ಸೆಗೆ ಬರುತ್ತಾರೆ. ತಪಾಸಣೆ, ಚಿಕಿತ್ಸೆ, ಹೆರಿಗೆ ಮಾಡಿಸಲು ಹೆರಿಗೆ ತಜ್ಞರ ಅವಶ್ಯಕತೆ ಇದೆ. ಈ ಬಗ್ಗೆ ಸಾರ್ವಜನಿಕರು ಹಲವು ಬಾರಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಹೆರಿಗೆ, ಸ್ತ್ರೀ ರೋಗ ತಜ್ಞರನ್ನು ನೇಮಿಸಿಲ್ಲ.

ಔಷಧಿಗಳ ಕೊರತೆ: ಈ ಆಸ್ಪತ್ರೆಗೆ ಹೆಚ್ಚಿನ ರೋಗಿಗಳು ಬರುತ್ತಿದ್ದು, ಸರ್ಕಾರ ವಾರ್ಷಿಕವಾಗಿ ಮಂಜೂರು ಮಾಡುವ ಒಂದು ಲಕ್ಷ ರೂಪಾಯಿ ಔಷಧ ಸಾಲುತ್ತಿಲ್ಲ. ಈ ಭಾಗದಲ್ಲಿ ಶಾಲೆ, ಕಾಲೇಜುಗಳಿದ್ದು, ವಿದ್ಯಾರ್ಥಿಗಳು ಗಾಯಗೊಂಡರೆ ಇಲ್ಲಿಗೆ ಚಿಕಿತ್ಸೆಗೆ ಬರುತ್ತಾರೆ. ಆಸ್ಪತ್ರೆಗೆ ಬ್ಯಾಂಡೇಜ್, ಟಿಂಚರ್, ಆಯಿಂಟ್ ಮೆಂಟ್ ಸರಬರಾಜು ಕಡಿಮೆಯಿದ್ದು, ತುರ್ತಾಗಿ ಪ್ರಾಥಮಿಕ ಚಿಕಿತ್ಸೆಯೂ ಸಿಗುತ್ತಿಲ್ಲ. ಶೌಚಾಲಯ ಸಮರ್ಪಕವಾಗಿಲ್ಲ. ಆಸ್ಪತ್ರೆಯಲ್ಲಿ ಎಫ್ಡಿಎ ಮತ್ತು ಎಲ್ಎಚ್ವಿ, ಡಿ ಗ್ರೂಪ್ ಹುದ್ದೆಗಳು ಖಾಲಿ ಇವೆ.

ವೈದ್ಯರಿಗೆ ಹಾಗೂ ಇತರೆ ಸಿಬ್ಬಂದಿಗೆ ವಸತಿ ಗೃಹಗಳು ಇಲ್ಲ. ಆದ್ದರಿಂದ ಮುಳಬಾಗಲಿನಿಂದ ನಿತ್ಯ ಓಡಾಡಬೇಕಾಗಿದೆ. ಸರ್ಕಾರ ಗಡಿಭಾಗದ ಪ್ರದೇಶಗಳ ಅಭಿವೃದ್ಧಿಗೆ ಪ್ರಾಧಿಕಾರವನ್ನೇ ರಚಿಸಿದೆ. ಗಡಿ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕೆಂಬ ಆಶಯ ಹೊಂದಿದೆ. ಆದರೆ ಅದು ಕಾರ್ಯರೂಪಕ್ಕೆ ಬರುತ್ತಿಲ್ಲ. ಗಡಿಭಾಗದಲ್ಲಿರುವ ಆಸ್ಪತ್ರೆಗೆ ಹೆಚ್ಚಿನ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಶಾಸಕ ಜಿ.ಮಂಜುನಾಥ್ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಹೆರಿಗೆ ತಜ್ಞರನ್ನು ನೇಮಿಸಬೇಕು
ನಂಗಲಿ ಆಸ್ಪತ್ರೆಗೆ ಸ್ತ್ರೀ ರೋಗ ತಜ್ಞರು, ಹೆರಿಗೆ ತಜ್ಞರ ಅವಶ್ಯಕತೆ ಇದೆ. ಈ ಬಗ್ಗೆ ಹಲವು ಬಾರಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ತಕ್ಷಣ ಸ್ತ್ರೀರೋಗ ತಜ್ಞರು ಮತ್ತು ಹೆರಿಗೆ ತಜ್ಞರನ್ನು ನೇಮಿಸಬೇಕು.
-ಸವಿತಾ ಅಮರೇಂದ್ರ ಕುಮಾರ್, ನಂಗಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.