ಬುಧವಾರ, ಮಾರ್ಚ್ 3, 2021
26 °C

ನಂಗಲಿ: ಜೆಡಿಯು ಸಮಾವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಂಗಲಿ: ಜೆಡಿಯು ಸಮಾವೇಶನಂಗಲಿ: ಪಕ್ಷವನ್ನು ತಾಲ್ಲೂಕಿನಲ್ಲಿ ಬಲಿಷ್ಠಗೊಳಿಸಲು ಪಕ್ಷದ ಮುಖಂಡರು ಮುಂದಾಗಬೇಕು ಎಂದು ಸಂಯುಕ್ತ ಜನತಾದಳ (ಜೆಡಿಯು) ರಾಜ್ಯ ಘಟಕದ ಅಧ್ಯಕ್ಷ ಎಂ.ಪಿ.ನಾಡಗೌಡ ಹೇಳಿದರು.ಮುಳಬಾಗಲು ತಾಲ್ಲೂಕಿನ ಬೈರಕೂರು ಹೋಬಳಿ ನಂಗಲಿ ಗ್ರಾಮದಲ್ಲಿ ಸಂಯುಕ್ತ ಜನತಾದಳ (ಜೆಡಿಯು) ಶುಕ್ರವಾರ ಆಯೋಜಿಸಿದ್ದ ಸಮಾವೇಶ ಮತ್ತು ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ರಾಜಕೀಯ ಕ್ಷೇತ್ರದಲ್ಲಿ ಭ್ರಷ್ಟಾಚಾರ, ಅನಾಚಾರ, ಗೂಂಡಾಗಿರಿ, ಅತ್ಯಾಚಾರಗಳು ಹೆಚ್ಚಾಗುತ್ತಿವೆ. ರಾಜಕಾರಣಿಗಳು ತಮ್ಮ ಪಕ್ಷವನ್ನು ಉಳಿಸಿಕೊಳ್ಳಲು ನೋಡುತ್ತಿದ್ದಾರೆಯೇ ಹೊರತು ಜನಸಾಮಾನ್ಯರ ಸಮಸ್ಯೆಗಳನ್ನು ಸರಿಪಡಿಸಲು ಮುಂದಾಗದಿರುವುದು ವಿಪರ್ಯಾಸದ ಸಂಗತಿ ಎಂದರು.ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಶ್ರಮಿಸಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕು ಎಂದು ಮನವಿ ಮಾಡಿದರು.ಹೆಬ್ಬಣಿ ಸಿ.ವಿ.ಗೋಪಾಲ್, ಮಲ್ಲೆಕುಪ್ಪ ಅಂಬರೀಶ್, ನಗರಸಭೆ ಮಾಜಿ ಸದಸ್ಯ ಕೋಲಾರ ಶ್ರೀನಿವಾಸರೆಡ್ಡಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾದರು.ಜೆಡಿಯು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ರೆಡ್ಡಿ, ರಾಜ್ಯ ಉಪಾಧ್ಯಕ್ಷ ಅರವಿಂದ ಎನ್.ದಳವಾಯಿ, ಲೋಕಪಾಲ್ ಜೈನ್, ಮೇಡಹಳ್ಳಿ ನಾಗರಾಜ್, ರಾಜ್ಯ ಖಜಾಂಚಿ ವೆಂಕಟಸ್ವಾಮಿ, ಶಿವರಾಮ್, ವೆಂಕಟರವಣ, ತಾಲ್ಲೂಕು ಘಟಕ ಅಧ್ಯಕ್ಷ ಲಕ್ಷ್ಮಯ್ಯ ಮತ್ತಿತರರು ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.