ಶುಕ್ರವಾರ, ಜೂನ್ 25, 2021
23 °C

ನಂದನ್‌ ನಿಲೇಕಣಿ, ಮೋಹನ್‌ ಮತಯಾಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜರಾಜೇಶ್ವರಿನಗರ: ಜರಗನಹಳ್ಳಿ, ಶಕ್ತಿಗಣಪತಿ­ನಗರ, ಸಾರಕ್ಕಿ, ಮೈಕೋ ಬಡಾವಣೆ, ಪುಟ್ಟೇನಹಳ್ಳಿ ಸೇರಿದಂತೆ ವಿವಿಧ ಬಡಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ನಂದನ್‌ ನಿಲೇಕಣಿ ಅವರು ಪಾದಯಾತ್ರೆ ಮೂಲಕ ಮತಯಾಚನೆ ಮಾಡಿದರು. ಸ್ವಚ್ಛ ಬೆಂಗಳೂರು ನಗರವನ್ನು ನಿರ್ಮಿಸಲು ಕಾಂಗ್ರೆಸ್‌ ಪಕ್ಷಕ್ಕೆ ಮತನೀಡುವಂತೆ ನಿಲೇಕಣಿ ಮನವಿ ಮಾಡಿದರು.ಪಿ.ಸಿ ಮೋಹನ್‌ ಪಾದಯಾತ್ರೆ 

ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್‌ ಅವರು ಬಿನ್ನಿಮಿಲ್ ಸಮೀಪದ ಛಲವಾದಿಪಾಳ್ಯದ ಪ್ರಮುಖ ಬೀದಿಗಳಲ್ಲಿ ಹಾಗೂ ಕೆ.ಆರ್. ಮಾರುಕಟ್ಟೆಯಲ್ಲಿ ಗುರುವಾರ ಪಾದಯಾತ್ರೆ ಹಾಗೂ ರೋಡ್‌ ಷೋ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು,  ‘ಐದು ವರ್ಷಗಳಿಂದ ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ.ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಸಂಸದರ ನಿಧಿಯಿಂದ ಕೊಳವೆಬಾವಿಗಳನ್ನು ಕೊರೆಸಲಾಗಿದೆ’ ಎಂದರು.

‘ಬಡ ಮತ್ತು ಮಧ್ಯಮದ ಜನರ ಅನುಕೂಲಕ್ಕಾಗಿ ಸಮುದಾಯ ಭವನಗಳನ್ನು ನಿರ್ಮಿಸಿ ಕೊಡಲಾಗಿದೆ. ಜನರ ಆರೋಗ್ಯ ಸಮಸ್ಯೆಗೆ ಆರೋಗ್ಯ ಶಿಬಿರಗಳನ್ನು ನಡೆಸಲಾಗಿದೆ’ ಎಂದು ಅವರು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.