ಶನಿವಾರ, ಏಪ್ರಿಲ್ 10, 2021
25 °C

ನಕಲಿ ಅಭ್ಯರ್ಥಿ ಬಂಧನ:2ಡಿಬಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಮಂಗಳವಾರ ಆರಂಭವಾದ ನರ್ಸಿಂಗ್ ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷಾ ಅಕ್ರಮದಲ್ಲಿ ತೊಡಗಿದ್ದ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದ್ದು, ಇನ್ನೊಬ್ಬಳು ವಿದ್ಯಾರ್ಥಿಯನ್ನು ಡಿಬಾರ್ ಮಾಡಲು ಶಿಫಾರಸು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಮೀರ್ ಶುಕ್ಲಾ ತಿಳಿಸಿದ್ದಾರೆ.ಬೀದರ್ ವೈದ್ಯಕೀಯ ಕಾಲೇಜಿನಲ್ಲಿ ಪರೀಕ್ಷೆ ನಡೆಯುತ್ತಿದ್ದು, ಕಾಪಿ ಮಾಡುತ್ತಿದ್ದ ಅಕ್ಕಮಹಾದೇವಿ ಸ್ಕೂಲ್ ಆಫ್ ನರ್ಸಿಂಗ್‌ನ ಸುರೇಶ ಎಂಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. ಕಿರಣ ಕುಮಾರಿ ಸ್ಕೂಲ್ ಆಫ್ ನರ್ಸಿಂಗ್‌ನ ಫಾತಿಮಾ ಎಂಬಾಕೆಯ ಪರವಾಗಿ ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿ ರೂಪಾ ಹೊಸಮನಿ ಎಂಬಾಕೆಯನ್ನು ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ. ವಿದ್ಯಾರ್ಥಿನಿಯನ್ನು ಡಿಬಾರ್ ಮಾಡಲು ಮಂಡಳಿಗೆ ಶಿಫಾರಸು ಮಾಡಲಾಗಿದೆ ಎಂದು ಹೇಳಿದ್ದಾರೆ.ಮಂಗಳವಾರ ಪರೀಕ್ಷೆ ಬರೆಯಲಿದ್ದ 1486 ವಿದ್ಯಾರ್ಥಿಗಳ ಪೈಕಿ 635 ವಿದ್ಯಾರ್ಥಿಗಳು ಗೈರು ಹಾಜರಿದ್ದರು. ದ್ವಿತೀಯ ವರ್ಷದ ಪರೀಕ್ಷೆಗೆ 970 ವಿದ್ಯಾರ್ಥಿಗಳ ಪೈಕಿ 530 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಶೇ. 55 ವಿದ್ಯಾರ್ಥಿಗಳು ಪರೀಕ್ಷೆ ಬರೆದಂತಾಗಿದೆ. ತೃತೀಯ ವರ್ಷದ 516 ವಿದ್ಯಾರ್ಥಿಗಳ ಪೈಕಿ 321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಶೇ. 62 ಹಾಜರಾತಿ ದಾಖಲಾಗಿದೆ. ನೂರ್ ಸ್ಕೂಲ್ ಆಫ್ ನರ್ಸಿಂಗ್‌ನ ಎಲ್ಲ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.