ಭಾನುವಾರ, ಜೂನ್ 20, 2021
20 °C

ನಕಲಿ ಎನ್‌ಕೌಂಟರ್: ತನಿಖಾ ಪ್ರಾಧಿಕಾರದ ಮುಖ್ಯಸ್ಥರಾಗಿ ನ್ಯಾ. ಬೇಡಿ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ಗುಜರಾತ್‌ನಲ್ಲಿ 2002-2006ರ ಅವಧಿಯಲ್ಲಿ ನಡೆದ 21 ನಕಲಿ ಎನ್‌ಕೌಂಟರ್ ಪ್ರಕರಣಗಳ ತನಿಖೆಯ ಉಸ್ತುವಾರಿ ಪ್ರಾಧಿಕಾರದ ಮುಖ್ಯಸ್ಥರನ್ನಾಗಿ  ಶುಕ್ರವಾರ ನ್ಯಾಯಮೂರ್ತಿ ಎಚ್.ಎಸ್. ಬೇಡಿ ಅವರನ್ನು ಸುಪ್ರೀಂ ಕೋರ್ಟ್ ನೇಮಿಸಿದೆ.ಪ್ರಾಧಿಕಾರದ ಅಧ್ಯಕ್ಷರಾಗಿರುವ  ನ್ಯಾಯಮೂರ್ತಿ ಎಂ.ಬಿ. ಷಾ ಅವರನ್ನು ಹುದ್ದೆಯಿಂದ ಕೆಳಗಿಳಿಯದಂತೆ ಕೋರಲು ಕಾಲಾವಕಾಶ ಕೇಳಿದ್ದ ಗುಜರಾತ್ ಸರ್ಕಾರದ ಮನವಿಯನ್ನು ತಿರಸ್ಕರಿಸಿದ ನಂತರ ನ್ಯಾಯಮೂರ್ತಿ ಅಫ್ತಾಬ್ ಆಲಂ, ಬೇಡಿಯವರನ್ನು ಈ ಪ್ರಾಧಿಕಾರದ ಮುಖ್ಯಸ್ಥರನ್ನಾಗಿ ನೇಮಿಸಿದ್ದಾರೆ. ಪ್ರಾಧಿಕಾರದ ಮುಖ್ಯಸ್ಥರನ್ನಾಗಿ ನೇಮಕಗೊಂಡಿರುವ ಬೇಡಿ ಅವರಿಗೆ ಸಂಪೂರ್ಣ ಸಹಕಾರ ನೀಡುವಂತೆ ಗುಜರಾತ್ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.