ನಕಲಿ ಕೀಟನಾಶಕ ಪ್ರಕರಣ ಏನಾಯಿತು?

7

ನಕಲಿ ಕೀಟನಾಶಕ ಪ್ರಕರಣ ಏನಾಯಿತು?

Published:
Updated:

ವಿಜಾಪುರದಲ್ಲಿ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ನಕಲಿ ಕೀಟನಾಶಕ ತಯಾರಿಸುವ ಜಾಲವೊಂದು ಪತ್ತೆಯಾಗಿತ್ತು. ಕಳೆದ ಐದು ವರ್ಷಗಳಿಂದ ಸುಮಾರು 5 ಕೋಟಿ ರೂ ಮೊತ್ತದ ನಕಲಿ ಕೀಟನಾಶಕ ತಯಾರಿಸಿ ಮಾರಾಟ ಮಾಡಿರಬಹುದೆಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿತ್ತು. ಈ ವಿಷಯ ಹಲವು ಪತ್ರಿಕೆಗಳಲ್ಲಿ ವರದಿಯಾಗಿದೆ.ಪ್ರಕರಣ ಬೆಳಕಿಗೆ ಬಂದು ನಾಲ್ಕು ತಿಂಗಳು ಕಳೆದರೂ ಜಿಲ್ಲಾಧಿಕಾರಿಗಳಾಗಲಿ, ಜಿಲ್ಲಾ ಪಂಚಾಯ್ತಿಯಾಗಲಿ,  ಕೃಷಿ ಇಲಾಖೆ ಸಂಬಂಧಿಸಿದ ಸಂಸ್ಥೆ ವಿರುದ್ಧ ಇದುವರೆಗೆ ಯಾವುದೇ ಕ್ರಮ ಜರುಗಿಸದಿರುವುದು ಪರಿಶೀಲನೆಯಿಂದ ತಿಳಿದುಬಂದಿದೆ.ಈ ಪ್ರಕರಣವನ್ನು ಮುಚ್ಚಿಹಾಕಲಾಯಿತೇ? ಸಂಬಂಧಿಸಿದ ಇಲಾಖೆ ಈ ಪ್ರಕರಣದಲ್ಲಿ ಶಾಮೀಲಾಗಿವೆಯೇ? ಅಥವಾ  ರಾಜಕೀಯ ಒತ್ತಡಗಳು ಕೆಲಸ ಮಾಡಿವೆಯೇ? ಎಂಬ ಸಾರ್ವಜನಿಕರ ಅನುಮಾನಗಳಿಗೆ ಉತ್ತರ ಸಿಗಬೇಕಿದೆ.ನಕಲಿ ಕೀಟನಾಶಕ ಮಾರಾಟ ಮಾಡುತ್ತಿದ್ದ ಅಂಗಡಿಗಳನ್ನು ಸ್ವಾಧೀನ ಪಡಿಸಿಕೊಂಡಿಲ್ಲ. ಈಗಲಾದರೂ ಸಂಬಂಧಪಟ್ಟವರು ಕ್ರಮ ಜರುಗಿಸುತ್ತಾರೆ ಎಂದು ನಂಬಬಹುದೇ?

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry