ಬೆಂಗಳೂರು: ಸಕಲೇಶಪುರ, ಗುಬ್ಬಿ ತಾಲ್ಲೂಕಿನಲ್ಲಿ ನಡೆದಿರುವ ನಕಲಿ ರಸಗೊಬ್ಬರ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ಬುಧವಾರ ವಿಧಾನಸಭೆಯಲ್ಲಿ ತಿಳಿಸಿದರು.

ಶೂನ್ಯ ವೇಳೆಯಲ್ಲಿ ಬಿಜೆಪಿಯ ಸಿ.ಟಿ.ರವಿ ಮಾಡಿದ ಪ್ರಸ್ತಾವಕ್ಕೆ ಉತ್ತರಿಸಿದ ಅವರು, ಇನ್ನು ಮುಂದೆ ಇಂತಹ ಪ್ರಕರಣಗಳು ಕಂಡುಬಂದರೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಕಲೇಶಪುರ ತಾಲ್ಲೂಕಿನ ಹಾನಬಾಳ್ನಲ್ಲಿ ನಕಲಿ ರಸಗೊಬ್ಬರ ಪೂರೈಕೆಯಾಗಿರುವುದು ದೃಢಪಟ್ಟಿದೆ. ಇದನ್ನು ಕೃಷಿ ಇಲಾಖೆ ಅಥವಾ ಕಂಪೆನಿ ಸರಬರಾಜು ಮಾಡಿಲ್ಲ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವೇ ಖರೀದಿ ಮಾಡಿ ಪೂರೈಸಿದೆ. ಸಂಘದ ಕಾರ್ಯದರ್ಶಿ ಅಶೋಕ, ವಿತರಕ ಮಿಲನ್ಗೌಡ ವಿರುದ್ಧ ಪ್ರಕರಣ ದಾಖಲಾಗಿದೆ ಎಂದರು.

ಗುಬ್ಬಿ ತಾಲ್ಲೂಕಿನಲ್ಲೂ ಇದೇ ರೀತಿ ಆಗಿದ್ದು, ಪ್ರಕರಣ ಸಂಬಂಧ ನಾಗಪ್ಪ, ಪಾಲಾಕ್ಷ ಅವರನ್ನು ಬಂಧಿಸಲಾಗಿದೆ. ಅಕ್ಕಪಕ್ಕದ ಜಿಲ್ಲೆಗಳಲ್ಲೂ ಇದೇ ರೀತಿ ಆಗಿರುವ ಸಾಧ್ಯತೆ ಇದೆ. ಹೀಗಾಗಿ ತಪಾಸಣೆ ನಡೆಸಿ ವರದಿ ನೀಡುವಂತೆ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಲಾಗಿದೆ. ಈ ಜಾಲವನ್ನು ಪತ್ತೆಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿರುದ್ಧ ಕ್ರಮಕೈಗೊಳ್ಳಲು ಸಹಕಾರ ಇಲಾಖೆಗೆ ಸೂಚಿಸಲಾಗಿದೆ. ಸ್ಥಳ ಪರಿಶೀಲನೆ ನಡೆಸಿ ನಕಲಿ ರಸಗೊಬ್ಬರದಿಂದ ಬೆಳೆ ಹಾನಿಯಾಗಿರುವುದು ಖಚಿತವಾದರೆ ಸಂಘದ ಮೂಲಕವೇ ಪರಿಹಾರ ಕೊಡಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದರು.

ಇದರ ಹಿಂದೆ ವ್ಯವಸ್ಥಿತವಾದ ಜಾಲ ಇರುತ್ತದೆ. ಬಂಧಿತರಿಗೆ ಜಾಮೀನು ಸಿಗದಂತೆ ಮಾಡಿ, ಇಂತಹ ಪ್ರಕರಣಗಳು ಕಂಡು ಬಂದ ಕೂಡಲೇ ದೂರು ನೀಡುವಂತೆ ರೈತರಿಗೆ ಮನವರಿಕೆ ಮಾಡಿಕೊಡಿ ಎಂದು ಕಾಂಗ್ರೆಸ್ನ ಕೆ.ಆರ್.ರಮೇಶ್ಕುಮಾರ್ ಸಲಹೆ ಮಾಡಿದರು.
ನಕಲಿ ರಸಗೊಬ್ಬರ ತಯಾರಕರ ವಿರುದ್ಧವೂ ಕ್ರಮ ಕೈಗೊಳ್ಳುವ ಅಗತ್ಯವಿದೆ. ಈ ಪ್ರಕರಣವನ್ನು ಸಿಒಡಿಗೆ ವಹಿಸಿ ಎಂದು ರವಿ ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.