ಶುಕ್ರವಾರ, ಮೇ 14, 2021
31 °C

ನಕಲಿ ರಸಗೊಬ್ಬರ ಮೂಲ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಕಲಿ ರಸಗೊಬ್ಬರ ಸರಬರಾಜು ಮಾಡುವುದರ ಮೂಲಕ ರೈತರನ್ನು ವಂಚಿಸುತ್ತಿದ್ದ ತಮಿಳುನಾಡು ಮೂಲದ ಪ್ರಮುಖ ಆರೋಪಿ ದೇವರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಕೃಷಿ ಖಾತೆ ರಾಜ್ಯ ಸಚಿವ ಕೃಷ್ಣ ಬೈರೇಗೌಡ ಸೋಮವಾರ ವಿಧಾನಸಭೆಗೆ ತಿಳಿಸಿದರು.ನಕಲಿ ರಸಗೊಬ್ಬರದ ಹಾವಳಿ ಹೆಚ್ಚಾಗಿರುವ ಸಂಬಂಧ ಕೆಲವು ಸದಸ್ಯರು ಇತ್ತೀಚೆಗೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಿ, ಸರ್ಕಾರದ ಗಮನಸೆಳೆದಿದ್ದರು.ಈ ಹಿನ್ನೆಲೆಯಲ್ಲಿ ಸ್ವಯಂ ಹೇಳಿಕೆ ನೀಡಿದ ಸಚಿವರು `ಹಾಸನದ ಕೃಷಿ ಅಧಿಕಾರಿಗಳು ಮತ್ತು ಪೊಲೀಸರು ನಡೆಸಿದ ಕಾರ್ಯಾಚರಣೆಯಿಂದ ಪ್ರಮುಖ ಆರೋಪಿ ಸಿಕ್ಕಿಬಿದ್ದಿದ್ದಾನೆ. ವಿಚಾರಣೆ ನಡೆದಿದ್ದು, ಕಾರ್ಖಾನೆ ಬಂದ್ ಮಾಡಿಸುವ ಸಂಬಂಧ ತಮಿಳುನಾಡು ಸರ್ಕಾರದ ಜತೆಗೂ ಚರ್ಚಿಸಲಾಗುವುದು' ಎಂದರು.ಎಂಆರ್‌ಪಿ ದರ: ರಸಗೊಬ್ಬರ ಮತ್ತು ಬಿತ್ತನೆ ಬೀಜವನ್ನು ಗರಿಷ್ಠ ಚಿಲ್ಲರೆ ಮಾರಾಟ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ಬಗ್ಗೆ ಸಾರ್ವಜನಿಕರು ಕೂಡ ದೂರು ನೀಡಬಹುದು ಎಂದು ಸಚಿವರು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.