ಶುಕ್ರವಾರ, ಮೇ 20, 2022
19 °C

ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆ: ರವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಆಂತರಿಕ ಭದ್ರತೆಗೆ ಸವಾಲಾಗಿರುವ ನಕ್ಸಲರ ಬಗ್ಗೆ ಕಠಿಣ ನಿಲುವು ತೆಗೆದುಕೊಳ್ಳಬೇಕು. ನಕ್ಸಲ್ ಚಟುವಟಿಕೆ ಸಂಪೂರ್ಣ ಹತ್ತಿಕ್ಕಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿ ಕಾರ್ಯಾಚರಣೆ ನಡೆಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಒತ್ತಾಯಿಸಿದರು.ಕಮಾಂಡೋ ತರಬೇತಿ ಪಡೆದಿದ್ದ ಕೆಎಸ್‌ಆರ್‌ಪಿ ಕಾನ್‌ಸ್ಟೆಬಲ್ ಮಾನೆ ನಕ್ಸಲ್ ವಿರುದ್ಧದ ಕಾರ್ಯಾಚರಣೆ ಯಲ್ಲಿ ನಕ್ಸಲರ ಗುಂಡಿಗೆ ಬಲಿಯಾಗಿ ರುವುದು ದುಃಖದ ಸಂಗತಿ. ಬಂದೂಕಿನ ಮೂಲಕ ಮಲೆನಾಡಿನ ಶಾಂತಿ ಕದಡಲು ಹೊರಟಿರುವ ನಕ್ಸಲರ ನಿಲುವನ್ನು ನಮ್ಮ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಇದು ಎಡ ಪಂಥೀಯ ಭಯೋತ್ಪಾದನೆ. ಪ್ರಜಾ ಪ್ರಭುತ್ವಕ್ಕೆ ಅಪಾಯಕಾರಿ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಕಿಡಿಕಾರಿದರು.ಸರ್ಕಾರಿ ಭೂಮಿ ಒತ್ತುವರಿ ತೆರವು ಬಗ್ಗೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಮಲೆನಾಡಿ ನಲ್ಲಿ ಒತ್ತುವರಿ ಸಮಸ್ಯೆಗೆ ಶತಮಾನದ ಇತಿಹಾಸ ಇದೆ. ಸಾಮಾಜಿಕ ನ್ಯಾಯದ ದೃಷ್ಟಿ ಕೋನದಲ್ಲಿ ಒತ್ತುವರಿ ಸಮಸ್ಯೆ ಯನ್ನು ಸರ್ಕಾರ ಬಗೆಹರಿಸಬೇಕು.ಎರಡು ಎಕರೆ ಒತ್ತುವರಿ ಮಾಡಿ ರುವವರನ್ನು ಮತ್ತು ನೂರಾರು ಎಕರೆ ಒತ್ತುವರಿದಾರರನ್ನು ಒಂದೇ ಮಾನದಂಡದಲ್ಲಿ ಅಳೆಯಬಾರದು. ರಾಜಕೀಯ ನಿರ್ಣಯ ಕೈಗೊಳ್ಳದೆ ನಮ್ಮ ಸರ್ಕಾರ ಒತ್ತುವರಿ ಖುಲ್ಲಾ ಮಾಡಿಸಲು ಕೈಹಾಕುವುದಿಲ್ಲ. ಈ ಸಂಬಂಧ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಇದೇ 14ರಂದು ಸಭೆ ನಡೆಯಲಿದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.