ಕಾರವಾರ: `ಭಯೋತ್ಪಾದನೆ ಸಂಘಟನೆಗಳಿಗೆ ಸೇರಿದ `ಸ್ಲೀಪರ್ ಸೆಲ್~ ರಹಸ್ಯವಾಗಿ ಚಟುವಟಿಕೆ ನಡೆಸುತ್ತಿದೆ ಎನ್ನುವುದು ಗೊತ್ತಿರುವ ಸಂಗತಿ. ಇಂತಹ ಚಟುವಟಿಕೆಗಳು ನಡೆಯುತ್ತಿರುವುದು ಮೇಲ್ನೋಟಕ್ಕೆ ಕಾಣಿಸದಿದ್ದರೆ ಯಾವುದೇ ರೀತಿಯ ಕ್ರಮ ಕೈಗೊಳ್ಳುವುದು ಕಷ್ಟಕರವಾಗಲಿದೆ~ ಎಂದು ಪಶ್ಚಿಮ ವಲಯ ಐಜಿಪಿ ಪ್ರತಾಪ ರೆಡ್ಡಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಪೊಲೀಸ್ ಇಲಾಖೆ ಇದನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡುತ್ತಿದೆ.

`ಕೆಲವು ಭಯೋತ್ಪಾದಕ ಸಂಘಟನೆಗಳು ನಕ್ಸಲರೊಡನೆ ಸೇರಿಕೊಂಡು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎನ್ನುವುದು ಸುಳ್ಳು. ಇಂತಹ ಊಹಾಪೋಹಗಳು ಆಗಾಗ ಕೇಳಿ ಬರುತ್ತಲೇ ಇರುತ್ತವೆ~ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

`ನಕ್ಸಲರ ವಿರುದ್ಧ ಕೈಗೊಂಡಿರುವ ಕೂಂಬಿಂಗ್ ಕಾರ್ಯಾಚರಣೆ ಮುಂದುವರಿದೆ. ನಕ್ಸಲ್ ಪಡೆಗಳಿಂದ ವಶಪಡಿಸಿಕೊಂಡಿರುವ ಮದ್ದುಗುಂಡುಗಳು ಎಲ್ಲಿಂದ ಸರಬರಾಜು ಆಗಿವೆ ಎನ್ನುವುದರ ಕುರಿತ ತನಿಖೆ ನಡೆಯುತ್ತಿದೆ~ ಎಂದು ರೆಡ್ಡಿ ನುಡಿದರು.

`ಅರಣ್ಯದಲ್ಲಿ ಅಷ್ಟೇ ಅಲ್ಲ ಅರಣ್ಯದಿಂದ ಹೊರಗಿದ್ದು ನಕ್ಸಲ್ ಚಟುವಟಿಕೆ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಹೋದರೆ ಅದನ್ನು ಬೇರೆಯದೇ ಆದ ರೀತಿಯಲ್ಲಿ ಅರ್ಥೈಸಲಾಗುತ್ತದೆ. ಮಾನವ ಹಕ್ಕು ಉಲ್ಲಂಘನೆ ಆಗಿದೆ ಎನ್ನುವ ಕೂಗು ಕೇಳಿ ಬರುತ್ತದೆ. ಈ ಕಾರಣದಿಂದಾಗಿ ಪೊಲೀಸರು ಸಮತೋಲನ ಕಾಯ್ದುಕೊಂಡು ಹೋಗಬೇಕಾಗಿದೆ~ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.