ಭಾನುವಾರ, ಜೂನ್ 20, 2021
20 °C

ನಕ್ಸಲ್: ಗಡಿಯಲ್ಲಿ ನಿಗಾ ವಹಿಸಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ವಿಶೇಷವಾಗಿ ಜಿಲ್ಲೆಯ ಗಡಿಭಾಗದಲ್ಲಿ ನಕ್ಸಲ್ ಅಥವಾ ಸಮಾಜ ಘಾತುಕ ಸಂಘಟನೆಗಳು ಚಟುವಟಿಕೆಗಳಲ್ಲಿ ತೊಡಗಿದ್ದರೆ ಅವುಗಳ ಮೇಲೆ ತೀವ್ರ ನಿಗಾವಹಿಸುವಂತೆ ಕೊಡಗು ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಆರ್.ಅಶೋಕ್ ಸೂಚನೆ ನೀಡಿದರು.ನಗರದ ಸುದರ್ಶನ ಅತಿಥಿ ಗೃಹದಲ್ಲಿ ಭಾನುವಾರ ನಡೆದ ಪೊಲೀಸ್ ಹಾಗೂ ಸಾರಿಗೆ ಇಲಾಖೆಯ ಸಾಧನೆಗಳ ಪರಾಮರ್ಶೆ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.ಕೊಡಗು ಜಿಲ್ಲೆಯ ಗಡಿಗೆ ಅಂಟಿಕೊಂಡಿರುವ ಕೇರಳ ರಾಜ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ನಕ್ಸಲ್ ಬಾಧಿತ ಪ್ರದೇಶಗಳಿರುವ ಕಾರಣ ಇಲ್ಲಿನ ಪೊಲೀಸರು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದರು.ಜಿಲ್ಲೆಯಲ್ಲಿ ಹಿಂದೂ-ಮುಸ್ಲಿಂ ಗಲಭೆ, ಮತಾಂತರ ಸಮಸ್ಯೆ, ಪರಿಶಿಷ್ಟರ ಮೇಲೆ ದೌರ್ಜನ್ಯ ಪ್ರಕರಣಗಳ ಬಗ್ಗೆಯೂ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು ಎಂದು ಮೂಲಗಳು ತಿಳಿಸಿವೆ.

ಪೊಲೀಸ್ ಠಾಣೆಗಳ ಅಭಿವೃದ್ಧಿಗಾಗಿ ಹಾಗೂ ಸಮವಸ್ತ್ರ ವಿತರಣೆಗಾಗಿ ಕ್ರಮಕೈಗೊಳ್ಳುವ ಬಗ್ಗೆ ಸಚಿವರು ಭರವಸೆ ನೀಡಿದರು ಎನ್ನಲಾಗಿದೆ.ಕುಶಾಲನಗರದಲ್ಲಿ ಡಿಪೋ- ಪ್ರಸ್ತಾವನೆ

ಮಡಿಕೇರಿಯ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಸ್ಥಳಾವಕಾಶ ಕೊರತೆ ಇರುವ ಕಾರಣ ಕುಶಾಲನಗರ ಹಾಗೂ ವಿರಾಜಪೇಟೆಯಲ್ಲಿ ಡಿಪೋಗಳನ್ನು ತೆರೆಯುವ ಬಗ್ಗೆ ಸಾರಿಗೆ ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು.ಜಿಲ್ಲೆಯ ಜನರು ಹೊಸ ಹೊಸ ಬಸ್‌ಮಾರ್ಗಗಳಿಗೆ ಒತ್ತಾಯಿಸುತ್ತಿದ್ದಾರೆ. ಆದರೆ, ಇಲ್ಲಿ ಬಸ್‌ಗಳನ್ನು ನಿಲ್ಲಿಸಲಿಕ್ಕೆ ಸ್ಥಳಾವಕಾಶದ ಕೊರತೆ ಇದೆ. ಅದರಿಂದಾಗಿ ಮತ್ತೆರಡು ಹೊಸ ಡಿಪೋಗಳನ್ನು ತೆರೆಯುವುದು ಸೂಕ್ತ ಎಂದು ಅವರು ಹೇಳಿದರು.ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಅಶೋಕ್, ಡಿಪೋ ಸ್ಥಾಪಿಸಲು ಸೂಕ್ತ ನಿವೇಶನವನ್ನು ಹುಡುಕುವಂತೆ ಹಾಗೂ ಅದನ್ನು ಮಂಜೂರು ಮಾಡಿಕೊಡಲು ಕ್ರಮಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.