ಗುರುವಾರ , ಮೇ 13, 2021
18 °C

ನಕ್ಸಲ್ ಪೀಡಿತ ಪ್ರದೇಶಕ್ಕೆ `ರೋಶನಿ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ನಕ್ಸಲ್ ಪೀಡಿತ ಜಿಲ್ಲೆಗಳ ಯುವಕರನ್ನು ಗುರಿಯಾಗಿಟ್ಟುಕೊಂಡು, ಅವರಿಗೆ ಕೌಶಲ ಅಭಿವೃದ್ಧಿ ತರಬೇತಿ ನೀಡುವ `ರೋಶನಿ' ಯೋಜನೆಗೆ ಕೇಂದ್ರ ಸರ್ಕಾರ ಶುಕ್ರವಾರ ಚಾಲನೆ ನೀಡಿದೆ.`ಈ ಯೋಜನೆಯಡಿ ತರಬೇತಿ ಪಡೆಯುವವರ ಪೈಕಿ ಶೇ 50ರಷ್ಟು ಮಹಿಳೆಯರು ಇರುತ್ತಾರೆ. ಬುಡಕಟ್ಟು ಗುಂಪುಗಳಿಗೂ ಆದ್ಯತೆ ಕೊಡಲಾಗುತ್ತದೆ' ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಜೈರಾಮ್ ರಮೇಶ್ ತಿಳಿಸಿದರು.ಮಾವೋವಾದಿಗಳು ಯುವಕರನ್ನು ಸೆಳೆಯುತ್ತಿರುವ ಹಿನ್ನೆಲೆಯಲ್ಲಿ  ಈ ವಿನೂತನ ಯೋಜನೆ ರೂಪಿಸಲಾಗಿದ್ದು, ಇದು ಯುವಪೀಳಿಗೆಗೆ ಹೊಸ ದಾರಿ ತೋರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ನಕ್ಸಲ್ ಪೀಡಿತ ಒಂಬತ್ತು ರಾಜ್ಯಗಳ 24 ಜಿಲ್ಲೆಗಳಲ್ಲಿ ಒಟ್ಟು 50 ಸಾವಿರ ಯುವಕರಿಗೆ ಕೌಶಲ ತರಬೇತಿ ನೀಡಿ, ಉದ್ಯೋಗಾವಕಾಶ ಕಲ್ಪಿಸುವುದು ಮೂರು ವರ್ಷಗಳ ಅವಧಿಯ ಈ ಯೋಜನೆಯಲ್ಲಿ ಸೇರಿದೆ. ಸರ್ಕಾರ, ಖಾಸಗಿ ಉದ್ದಿಮೆಗಳು, ಸ್ವಯಂಸೇವಾ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಅಭ್ಯರ್ಥಿಗಳಿಗೆ ಅವರು ಬಯಸಿದ ವಿಭಾಗಗಳಲ್ಲಿ ತರಬೇತಿ ಕೊಡಲಾಗುವುದು ಎಂದು ವಿವರಿಸಿದರು.ಯವಕರು, ಶಾಲೆ ತೊರೆದವರು ಹಾಗೂ ಕಾಲೇಜು ವ್ಯಾಸಂಗ ಪೂರ್ಣಗೊಳಿಸಿದವರಿಗೆ ಕೌಶಲ ತರಬೇತಿ ಕೊಡಲು ವಿವಿಧ ಕಾರ್ಯತಂತ್ರ ರೂಪಿಸಲಾಗುವುದು. ಇದಕ್ಕೆ ತಗಲುವ ವೆಚ್ಚವನ್ನು 75: 25ರ ಅನುಪಾತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಭರಿಸಲಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.