ಕೋಲ್ಕತ್ತ (ಪಿಟಿಐ): ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸಲು ವಿಶೇಷ ಸೇನಾ ನೇಮಕಾತಿ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ರಕ್ಷಣಾ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ತಿಳಿಸಿದರು.

ನಕ್ಸಲ್ ಸಮಸ್ಯೆ ನಿವಾರಣೆಗೆ ಬಹುಮುಖಿ ಪ್ರಯತ್ನಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡೂ ಕಾರ್ಯೋನ್ಮುಖವಾಗಬೇಕು. ಅದರಲ್ಲೂ ತೀರಾ ಹಿಂದುಳಿದಿರುವ ಗ್ರಾಮೀಣ ಮತ್ತು ಬುಡಕಟ್ಟು ಪ್ರದೇಶಗಳ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಗುರುವಾರ ಸುದ್ದಿಗಾರರ ಜತೆ ಹೇಳಿದರು.

ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಸೇನೆ ವಿಶೇಷ ಪಾತ್ರ ವಹಿಸಲಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ, `ಸದ್ಯ ಅಂತಹ ಯಾವುದೇ ಪ್ರಸ್ತಾವ ಇಲ್ಲ. ನಕ್ಸಲರನ್ನು ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ನಕ್ಸಲ್ ನಿಗ್ರಹ ವಿಶೇಷ ಪಡೆಯೇ ನಿಗ್ರಹಿಸಲಿದೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.